ಚೆನ್ನೈ: ತಮಿಳು ನಟಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ವಾಲಾಸರವಕ್ಕಂನಲ್ಲಿ ನಡೆದಿದೆ.
ರಿಯಾಮಿಕಾ (26) ನೇಣಿಗೆ ಶರಣಾದ ನಟಿ. ರಿಯಾಮಕ್ಕ ತನ್ನ ಸಹೋದರ ಪ್ರಕಾಶ್ ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ನ. 28ರಂದು ತನ್ನ ಸಹೋದರನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ..
ಈಕೆ ಕುಂಡ್ರತೈಲ್ ಕುಮಾರನುಕು ಕೊಂಡಾಟ್ಟಮ್ ಮತ್ತು ಅಘೋರಿ-ಯಿನ್ ಅಟ್ಟಮ್ ಆರಂಬಂ ಚಿತ್ರಗಳಲ್ಲಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ರಿಯಾಮಿಕಾ ತನ್ನ ಸಹೋದರ ಪ್ರಕಾಶ್ರೊಂದಿಗೆ ವಲಸರವಕ್ಕಮ್ನ ಶ್ರೀದೇವಿ ಕುಪ್ಪಂ ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿ ಕಳೆದ ನಾಲ್ಕು ತಿಂಗಳಿನಿಂದ ವಾಸವಿದ್ದರು. ರಿಯಾಮಿಕಾ ಮಂಗಳವಾರ ರಾತ್ರಿ ತಡವಾಗಿ ಮನೆಗೆ ಬಂದಳು. ನಾನವಳನ್ನು ಕೊನೆಯಬಾರಿಗೆ ನೋಡಿದ್ದು ಅಂದೇ, ಅಂದು ಅವಳು ತುಂಬಾ ದಣಿದಿದ್ದ ಸ್ಥಿತಿಯಲ್ಲಿದ್ದಳು ಎಂದು ಸಹೋದರ ಪ್ರಕಾಶ್ ತಿಳಿಸಿದ್ದಾರೆ.
ಅಲ್ಲದೇ ಮಂಗಳವಾರ ರಾತ್ರಿ ರಿಯಾಮಿಕಾ ತನ್ನ ಸ್ನೇಹಿತ ದಿನೇಶ್‌ಗೆ ಕೊನೆಯ ಬಾರಿ ಕರೆ ಮಾಡಿದ್ದಾಳೆ. ದಿನೇಶ್ ಕರೆ ಸ್ವೀಕರಿಸಲಿಲ್ಲ.ಆದರೆ ಬುಧವಾರ ದಿನೇಶ್ ಆಕೆಗೆ ಕರೆ ಮಾಡಿದಾಗ, ಆಕೆ ಕರೆ ಸ್ವೀಕರಿಸಲಿಲ್ಲ. ಈ ಕಾರಣಕ್ಕಾಗಿ ದಿನೇಶ್ ರಿಯಾಮಿಕಾಳನ್ನು ಭೇಟಿ ಮಾಡಲು ನಿರ್ಧರಿಸಿ, ರಿಯಾಮಿಕಾ ಮನೆಗೆ ಬಂದು ಪ್ರಕಾಶ್‌ನನ್ನು ಭೇಟಿ ಮಾಡಿ ವಿಷಯ ತಿಳಿಸಿದ್ದಾನೆ.
ದಿನೇಶ್ ಹಾಗೂ ಪ್ರಕಾಶ್, ನಟಿ ರಿಯಾಮಿಕ್ಕ ರೂಮಿನ ಬಾಗಿಲು ತಟ್ಟಿದ್ದಾರೆ. ಆದರೆ ರಿಯಾಮಿಕ್ಕ ಯಾವುದೇ ಪ್ರತಿಕ್ರಿಯೆ ನೀಡದಿದ್ದಾಗ ಪ್ರಕಾಶ್ ಕಿಟಿಕಿಯನ್ನು ಒಡೆದು ನೋಡಿದ್ದಾನೆ. ಈ ವೇಳೆ ರಿಯಾಮಿಕ್ಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ತಕ್ಷಣ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹವನ್ನು ವಶಕ್ಕೆ ಪಡೆದಿದ್ದಾರೆ. ಕೆಲವು ಚಿತ್ರಗಳಲ್ಲಿ ತೊಡಗಿಕೊಂಡಿದ್ದ ರಿಯಾಮಿಕಾ ಅವರಿಗೆ ಕಾಲಿವುಡ್ನಲ್ಲಿ ಹೆಚ್ಚು ಅವಕಾಶ ಬರುತ್ತಿತ್ತಂತೆ. ಹೆಚ್ಚು ಚಿತ್ರದಲ್ಲಿ ಭಾಗಿಯಾಗದೇ ಒತ್ತಡಕ್ಕೆ ಒಳಗಾಗಿದ್ದರು. ಕೆಲಸದ ಒತ್ತಡದಿಂದ ರಿಯಾಮಿಕ್ಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…