ಬೆಳಗಾವಿ: ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂ. ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಅಲ್ಲದೆ, ರಾಜ್ಯ ಸರ್ಕಾರವು 1 ಕೋಟಿ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
ಹಿಂಡಲಗಾದ ವಿಜಯನಗರದಲ್ಲಿರುವ ಸಂತೋಷ್ ನಿವಾಸಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಬುಧವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಡಿ.ಕೆ. ಶಿವಕುಮಾರ್ ಪರಿಹಾರದ ಘೋಷಣೆ ಮಾಡಿದರು. ಬೆಳಗಾವಿಯ ಹಿಂಡಲಗಾ ಗ್ರಾ.ಪಂ.ವ್ಯಾಪ್ತಿಯಲ್ಲಿ 108 ರಸ್ತೆ ಕಾಮಗಾರಿಗೆ ಸಂತೋಷ್ ಪಾಟೀಲ್ ಖರ್ಚು ಮಾಡಿರುವ 4 ಕೋಟಿ ರೂ. ಹಣದ ಬಿಲ್ ಗಳನ್ನೂ ಸರ್ಕಾರವೇ ಪಾವತಿ ಮಾಡಬೇಕು. ತಾತ್ಕಾಲಿಕವಾಗಿ ನಾವು ಸಂತೋಷ್ ಪತ್ನಿಗೆ ಉದ್ಯೋಗ ನೀಡುತ್ತೇವೆ. ಸರ್ಕಾರವು ಶೀಘ್ರ ಆಕೆಗೆ ಸರ್ಕಾರಿ ನೌಕರಿ ನೀಡಬೇಕು. ಸರ್ಕಾರವು ಈ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ನೀಡಬೇಕು ಎಂದು ಡಿಕೆಶಿ ಆಗ್ರಹಿಸಿದರು.
ಪ್ರಸ್ತುತ ಎಲ್ಲಾ ದಾಖಲೆಗಳೂ ಈಶ್ವರಪ್ಪ ಅವರನ್ನೇ ಆರೋಪಿ ಸ್ಥಾನದಲ್ಲಿ ಕಾಣುವಂತೆ ಮಾಡಿದೆ. ಹೀಗಾಗಿ ಪೊಲೀಸರು ತತ್‌ಕ್ಷಣ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಕಣ್ಣೀರು ಹಾಕಿದ ಸಂತೋಷ್ ತಾಯಿ, ಮಗನ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು. ಆರೋಪಿಗಳನ್ನು ಜೈಲಿಗಟ್ಟಬೇಕು ಎಂದು ಮನವಿ ಮಾಡಿದರು. ನ್ಯಾಯಕ್ಕಾಗಿ ಹೋರಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ ಮತ್ತಿತರರು ಉಪಸ್ಥಿತರಿದ್ದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…