Featured

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋ ಕಾಲ್‍ನಲ್ಲಿ ಪತ್ನಿಗೆ ಹೆದರಿಸಲು ಹೋಗಿ ನೇಣಿಗೆ ಬಲಿಯಾದ ಪತಿ – Vishwanews24

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ  ವೀಡಿಯೋ ಕಾಲ್‍ನಲ್ಲಿ ಪತ್ನಿಗೆ ಹೆದರಿಸಲು ಹೋಗಿ ನೇಣಿಗೆ ಬಲಿಯಾದ ಪತಿ

ಬೆಂಗಳೂರು: ಪತ್ನಿಗೆ ವೀಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸಲು ಯತ್ನಿಸಿದ ಜಿಮ್ ಟ್ರೈನರ್ ಸಾವಿಗೀಡಾದ ಘಟನೆ ನಗರದ ಬಾಗಲಗುಂಟೆಯಲ್ಲಿ ನಡೆದಿದೆ.

ಮೃತನನ್ನು ಬಿಹಾರ  ಮೂಲದ ಅಮಿತ್ ಕುಮಾರ್ (28) ಎಂದು ಗುರುತಿಸಲಾಗಿದೆ. ಸುಮಾರು ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ  ವಾಸವಾಗಿದ್ದ ಅಮಿತ್, ಹಾಸನ ಮೂಲದ ಯುವತಿಯನ್ನ ಮದುವೆಯಾಗಿದ್ದ. ಇತ್ತೀಚೆಗೆ ಪತ್ನಿ ಹಾಗೂ ಅಮಿತ್ ನಡುವೆ ಗಲಾಟೆ ನಡೆದು, ಆಕೆ ತವರು ಮನೆ ಸೇರಿದ್ದಳು. ಇದರಿಂದ ಬೇಸತ್ತ ಅಮಿತ್ ಆಕೆಗೆ ವೀಡಿಯೋ ಕಾಲ್ ಮಾಡಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಲು ಮುಂದಾಗಿದ್ದಾನೆ. ಈ ವೇಳೆ ಮೊಬೈಲ್ ಕೆಳಗೆ ಬಿದ್ದಿದ್ದು, ನೇಣು ಬಿಗಿದುಕೊಂಡಿದೆ. ಇದರಿಂದ ಆತ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ.

ಕಳೆದ ಮೂರು ವರ್ಷಗಳ ಹಿಂದೆ ಅಮಿತ್ ಯುವತಿಯನ್ನು ಮದುವೆಯಾಗಿದ್ದ. ಮೂರು ತಿಂಗಳ ಹಿಂದೆ ಅಮಿತ್ ಪತ್ನಿ ನರ್ಸಿಂಗ್​ಗೆ ಕೆಲಸಕ್ಕೆ ಸೇರಿದ್ದಳು. ಇದೇ ವಿಚಾರಕ್ಕೆ ಇಬ್ಬರ ನಡುವೆ ಈ ಹಿಂದೆ ಜಗಳ ನಡೆದಿತ್ತು. ಇದಾದ ಬಳಿ ಆಕೆ ತವರು ಮನೆ ಸೇರಿದ್ದಳು. ಕಳೆದ ವಾರ ಆಕೆಯನ್ನು ಕರೆದುಕೊಂಡು ಬಂದಿದ್ದ ಅಮಿತ್ ಮತ್ತೆ ಇದೇ ವಿಚಾರಕ್ಕೆ ಗಲಾಟೆ ಮಾಡಿದ್ದ. ಇದರಿಂದ ಮನನೊಂದ ಮಹಿಳೆ ಮರಳಿ ತವರು ಮನೆಗೆ ಹೋಗಿದ್ದಳು.

ಘಟನಾ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago