ಬೆಂಗಳೂರು: ಪತ್ನಿಗೆ ವೀಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸಲು ಯತ್ನಿಸಿದ ಜಿಮ್ ಟ್ರೈನರ್ ಸಾವಿಗೀಡಾದ ಘಟನೆ ನಗರದ ಬಾಗಲಗುಂಟೆಯಲ್ಲಿ ನಡೆದಿದೆ.
ಮೃತನನ್ನು ಬಿಹಾರ ಮೂಲದ ಅಮಿತ್ ಕುಮಾರ್ (28) ಎಂದು ಗುರುತಿಸಲಾಗಿದೆ. ಸುಮಾರು ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಅಮಿತ್, ಹಾಸನ ಮೂಲದ ಯುವತಿಯನ್ನ ಮದುವೆಯಾಗಿದ್ದ. ಇತ್ತೀಚೆಗೆ ಪತ್ನಿ ಹಾಗೂ ಅಮಿತ್ ನಡುವೆ ಗಲಾಟೆ ನಡೆದು, ಆಕೆ ತವರು ಮನೆ ಸೇರಿದ್ದಳು. ಇದರಿಂದ ಬೇಸತ್ತ ಅಮಿತ್ ಆಕೆಗೆ ವೀಡಿಯೋ ಕಾಲ್ ಮಾಡಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಲು ಮುಂದಾಗಿದ್ದಾನೆ. ಈ ವೇಳೆ ಮೊಬೈಲ್ ಕೆಳಗೆ ಬಿದ್ದಿದ್ದು, ನೇಣು ಬಿಗಿದುಕೊಂಡಿದೆ. ಇದರಿಂದ ಆತ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ.
ಕಳೆದ ಮೂರು ವರ್ಷಗಳ ಹಿಂದೆ ಅಮಿತ್ ಯುವತಿಯನ್ನು ಮದುವೆಯಾಗಿದ್ದ. ಮೂರು ತಿಂಗಳ ಹಿಂದೆ ಅಮಿತ್ ಪತ್ನಿ ನರ್ಸಿಂಗ್ಗೆ ಕೆಲಸಕ್ಕೆ ಸೇರಿದ್ದಳು. ಇದೇ ವಿಚಾರಕ್ಕೆ ಇಬ್ಬರ ನಡುವೆ ಈ ಹಿಂದೆ ಜಗಳ ನಡೆದಿತ್ತು. ಇದಾದ ಬಳಿ ಆಕೆ ತವರು ಮನೆ ಸೇರಿದ್ದಳು. ಕಳೆದ ವಾರ ಆಕೆಯನ್ನು ಕರೆದುಕೊಂಡು ಬಂದಿದ್ದ ಅಮಿತ್ ಮತ್ತೆ ಇದೇ ವಿಚಾರಕ್ಕೆ ಗಲಾಟೆ ಮಾಡಿದ್ದ. ಇದರಿಂದ ಮನನೊಂದ ಮಹಿಳೆ ಮರಳಿ ತವರು ಮನೆಗೆ ಹೋಗಿದ್ದಳು.
ಘಟನಾ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…