ಜಿಲ್ಲೆ

ಆತ್ಮ ವಿಶ್ವಾಸದಿಂದ ಚುನಾವಣೆ ಎದುರಿಸಿ: ಶ್ರೀನಿವಾಸ ಪೂಜಾರಿ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಮಂಗಳವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ದಿನಕರ ಶೆಟ್ಟಿ ಹೆರ್ಗ ಅವರ ಅಧ್ಯಕ್ಷತೆಯಲ್ಲಿ ಜರಗಿತು.

“ಸರಕಾರ ಬದಲಾಯಿಸಿ, ಬಿಜೆಪಿ ಗೆಲ್ಲಿಸಿ’ ಎನ್ನುವ ಧ್ಯೇಯವಾಕ್ಯದೊಂದಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು. ಮತ್ತೂಮ್ಮೆ ಕರ್ನಾಟಕದಲ್ಲಿ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತರುವಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಅಹರ್ನಿಶಿ  ದುಡಿಯಬೇಕು ಎಂದು  ಜಿಲ್ಲಾ ಚುನಾವಣಾ ಸಂಚಾಲಕ, ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಚುನಾವಣೆಯನ್ನು ಅತ್ಯಂತ ಯಶಸ್ವಿ ಮತ್ತು ಸುಸೂತ್ರವಾಗಿ ನಿರ್ವಹಣೆ ಮಾಡುವ ಬಗ್ಗೆ ಜವಾಬ್ದಾರಿ, ಸವಾಲು, ಕಾರ್ಯಯೋಜನೆ, ಅಭಿಯಾನ ಹೀಗೆ ಒಟ್ಟು 16 ಅಂಶಗಳನ್ನೊಳಗೊಂಡ ವಿಷಯಗಳ ಬಗ್ಗೆ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್‌ ಶೆಟ್ಟಿ ಮತ್ತು ಸಂಧ್ಯಾ ರಮೇಶ್‌ ವಿವರಣೆ ನೀಡಿದರು.

ಮಾಧ್ಯಮ ನಿರ್ವಹಣೆಯ ಬಗ್ಗೆ ಕಟಪಾಡಿ ಶಂಕರ ಪೂಜಾರಿ, ಚುನಾವಣಾ ನೀತಿ ಸಂಹಿತೆ ಮತ್ತು ಕಾನೂನಿನ ವಿಚಾರವಾಗಿ ಮನೋಹರ ಕಲ್ಮಾಡಿ ಮಾಹಿತಿ ನೀಡಿದರು.

ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಕುಂದರ್‌, ವಿವಿಧ ಚುನಾಯಿತ ಪ್ರತಿನಿಧಿಗಳು, ಮೋರ್ಚಾ ಹಾಗೂ ಪ್ರಕೋಷ್ಠಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡ‌ಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago