ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಜಮೀರ್ ವಿರುದ್ಧ ಪ್ರಕರಣದ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್ – Vishwanews24
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಜಮೀರ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್
ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀರ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಜಮೀರ್ ವಿರುದ್ಧದ ಕೇಸ್ ಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಮಧ್ಯಂತರ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಿಂದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ದಾಖಲಿಸಲಾಗಿತ್ತು.
ಉಡುಪಿ : ಅಬಕಾರಿ ಡಿಸಿಯ ನಕಲಿ ಸಹಿ, ಸೀಲು ಬಳಕೆ ಆರೋಪ – ದೂರು ದಾಖಲು – Vishwanews24
ಈ ಪ್ರಕರಣವನ್ನು ರದ್ದುಕೋರಿ ಹೈಕೋರ್ಟ್ ಗೆ ಶಾಸಕ ಜಮೀರ್ ಅಹ್ಮದ್ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು, ವಿಚಾರಣೆ ಪೂರ್ಣಗೊಳಿಸಿದ ನಂತ್ರ ಆದೇಶವನ್ನು ಕಾಯ್ದಿರಿಸಿತ್ತು.
ಅಂದಹಾಗೇ ಎಸಿಬಿಯ ಶಾಸಕ ಜಮೀರ್ ಅಹ್ಮದ್ ವಿರುದ್ಧ 80.44 ಕೋಟಿ ಆದಾಯ ಮೀರಿ ಅಕ್ರಮ ಆಸ್ತಿ ಆರೋಪದಲ್ಲಿ ಪ್ರಕರಣ ದಾಖಲಿಸಿತ್ತು. ಶೇ.2031ರಷ್ಟು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬುದಾಗಿ ಎಸಿಬಿ ಕೇಸ್ ದಾಖಲಿಸಿತ್ತು. ಇದೇ ಪ್ರಕರಣವನ್ನು ರದ್ದು ಕೋರಿ ಶಾಸಕ ಜಮೀರ್ ಅಹ್ಮದ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಉಡುಪಿ : ಅಬಕಾರಿ ಡಿಸಿಯ ನಕಲಿ ಸಹಿ, ಸೀಲು ಬಳಕೆ ಆರೋಪ – ದೂರು ದಾಖಲು – Vishwanews24
