Featured

ಆದಿ ಉಡುಪಿ – ಮಲ್ಪೆ ರಸ್ತೆ ಚತುಷ್ಪಥ ಅಭಿವೃದ್ಧಿ ಯೋಜನೆಗೆ ಟೆಂಡರ್ ನೋಟಿಫಿಕೇಶನ್ : ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಅಭಿನಂದನೆ – Vishwanews24

ಆದಿಉಡುಪಿ – ಮಲ್ಪೆ ರಸ್ತೆ ಚತುಷ್ಪಥ ಅಭಿವೃದ್ಧಿ ಯೋಜನೆಗೆ ಟೆಂಡರ್ ನೋಟಿಫಿಕೇಶನ್ : ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಅಭಿನಂದನೆ – Vishwanews24

ಉಡುಪಿ: ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ 169ಎ ಇದನ್ನು ಆದಿಉಡುಪಿಯಿಂದ ಮಲ್ಪೆಯ ವರೆಗೆ ಮತ್ತು ಪರ್ಕಳದಿಂದ ಹೆಬ್ರಿಯ ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಟೆಂಡರ್ ನೋಟಿಫಿಕೇಶನ್ ಆಗಿದ್ದು, ಜನವರಿ 25ಕ್ಕೆ ಟೆಂಡರ್ ಬಿಡ್ ತೆರೆದು ಶೀಘ್ರವಾಗಿ ಕಾಮಗಾರಿ ಕೈಗೆತ್ತಿಕೊಳ್ಳುವ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಪ್ರವಾಸೋದ್ಯಮ ಹಾಗೂ ಮೀನುಗಾರಿಕೆ ವಲಯದ ಅಭಿವೃದ್ಧಿಯ ದೃಷ್ಟಿಯಿಂದ ಮಲ್ಪೆಯಿಂದ ಹೆಬ್ರಿಯ ವರೆಗೆ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಗೊಳಿಸುವುದು ಪ್ರಮುಖ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ ಸದ್ರಿ ಯೋಜನೆಗೆ ಅನುಮೋದನೆ ದೊರಕುವ ವರೆಗೆ ನಿರಂತರವಾಗಿ ಪ್ರಯತ್ನಿಸಿ, ಶ್ರಮ ವಹಿಸಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಹಾಗೂ ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಅಭಿವೃದ್ಧಿ ಯೋಜನೆಗೆ ಅನುಮೋದನೆ ನೀಡಿರುವ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ರೂ.350.00 ಕೋಟಿ ಮೊತ್ತದ ಈ ಯೋಜನೆಯಲ್ಲಿ ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ 169ಎ ಹಾದು ಹೋಗುವ ಆದಿಉಡುಪಿಯಿಂದ ಮಲ್ಪೆಯ ವರೆಗೆ ಹಾಗೂ ಪರ್ಕಳದಿಂದ ಹಿರಿಯಡ್ಕದ ವರೆಗೆ ಚತುಷ್ಪಥ ಮತ್ತು ಹಿರಿಯಡ್ಕದಿಂದ ಹೆಬ್ರಿಯ ವರೆಗೆ ದ್ವಿಪಥವಾಗಿ ಹೆದ್ದಾರಿಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

16 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

16 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

16 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

16 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

18 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago