ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದರು.
ಇಂದು ಮಂಡ್ಯಗೆ ಆಗಮಿಸಿ ಪ್ರಧಾನಿ ಮೋದಿ ಮಠದಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದರು. ಬಳಿಕ ಕಾಲಭೈರವೇಶ್ವರನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿಗೆ ಆದಿಚುಂಚನಗಿರಿ ಶ್ರೀಗಳು ತಿಲಕವಿಟ್ಟು ಆಶೀರ್ವದಿಸಿದರು
ದೇಗುಲ ಉದ್ಘಾಟನೆ ಬಳಿಕ ಭೈರವೈಕ್ಯ ಬಾಲಗಂಗಾಧರನಾಥ ಶ್ರೀ ಮೂರ್ತಿಗೆ ಮೋದಿ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ದೇಗುಲ ವೀಕ್ಷಿಸಿದರು. ಈ ವೇಳೆ, ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಧಾನಿಗೆ ಸಾಥ್ ನೀಡಿದರು.
ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿರುವ ಡಾ. ಬಾಲಗಂಗಾಧರನಾಥ ಶ್ರೀಗಳ ಅಂತ್ಯಸಂಸ್ಕಾರದ ಸ್ಥಳದಲ್ಲಿನ ಮಂಗಳ ಮಂಟಪದ ಮೇಲೆ 26,250 ಚದರ ಅಡಿ ವಿಸ್ತೀರ್ಣದಲ್ಲಿ ಭೈರವೈಕ್ಯ ಮಂದಿರ ನಿರ್ಮಾಣವಾಗಿದೆ. ಮಂದಿರಕ್ಕಾಗಿ ಸುಮಾರು 80 ಕೋಟಿ ರೂ. ವೆಚ್ಚ ಮಾಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…