ಆದಿತ್ಯ ರಾವ್ ಒಬ್ಬ ಭಯೋತ್ಪಾದಕನಾಗಿದ್ದು ಸರ್ಕಾರ ಆತನ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಿದೆ : ಕೋಟ ಶ್ರೀನಿವಾಸ ಪೂಜಾರಿ -Vishwanews24
ಚಿಕ್ಕಬಳ್ಳಾಪುರ: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಇಂದು ಪೊಲೀಸರಿಗೆ ಶರಣಾಗಿರುವ ಆದಿತ್ಯ ರಾವ್ ಒಬ್ಬ ಭಯೋತ್ಪಾದಕನಾಗಿದ್ದು ಸರ್ಕಾರ ಆತನ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ ಅರ್ಚಕರ ಹಾಗೂ ಆಗಮಿಕರ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಆರೋಪಿ ಈಗಾಗಲೇ ಪೊಲೀಸರಿಗೆ ಶರಣಾಗಿದ್ದು ಆತನ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಜಾತಿ-ಧರ್ಮ ನೋಡುವುದಿಲ್ಲ. ಆತ ಒಬ್ಬ ಭಯೋತ್ಪಾದಕ ಎಂದರು. ವಿಮಾನ ನಿಲ್ದಾಣದಲ್ಲಿ ಇಟ್ಟ ಬಾಂಬನ್ನು ಮಂಗಳೂರು ಪೊಲೀಸರು ಅತ್ಯಂತ ಚಾಣಕ್ಯತನಿಂದ ಭೇದಿಸಿ ಅದನ್ನು ನಿಷ್ಕ್ರಿಯಗೊಳಿಸಿದ್ದಾರೆ. ಇಲ್ಲದೇ ಹೋಗಿದ್ದರೆ ಸಾಕಷ್ಟು ಅನಾಹುತ ಆಗುತ್ತಿತ್ತು ಎಂದರು.
ಮಂಗಳೂರಿನಲ್ಲಿ ನಡೆಯುತ್ತಿರುವ ಹಲವು ದುಷ್ಕೃತ್ಯಗಳ ಹಿಂದೆ ಹೊರ ರಾಜ್ಯಗಳ ಕೈವಾಡ ಇರುವ ಶಂಕೆ ಇದೆ. ಈ ಬಗ್ಗೆ ಪೊಲೀಸರು ಎಲ್ಲ ದೃಷ್ಟಿಕೋನದಿಂದ ತನಿಖೆ ನಡೆಸುತ್ತಿದ್ದಾರೆ ಎಂದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
