ನವದೆಹಲಿ,: ಆಧಾರ್ ಕಾರ್ಡ್ ನೊಂದಿಗೆ ಪಾನ್ ಕಾರ್ಡ್ ಲಿಂಕ್ ಮಾಡದೆ ಇದ್ದರೆ ಪಾನ್ ಅಮಾನ್ಯವೆಂದು ಪರಿಗಣಿಸಲಾಗಿದ್ದು, ಈ ಹಿನ್ನಲೆ ಮಾರ್ಚ್ 31ರೊಳಗೆ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಬೇಕಾಗಿದೆ.
ಪಾನ್ ಜೊತೆ ಆಧಾರ್ ಲಿಂಕ್ ಮಾಡದೆ ಹೋದ್ರೆ ಏನು ಸಮಸ್ಯೆಯಾಗುತ್ತದೆ ಎನ್ನುವ ಬಗ್ಗೆ ಚಾರ್ಟರ್ಡ್ ಅಕೌಂಟೆಂಟ್ಸ್ ಮತ್ತು ಕಾನೂನು ಪರಿಣಿತರು ಭಿನ್ನಾಭಿಪ್ರಾಯ ನೀಡಿದ್ದಾರೆ.
ಚಾರ್ಟರ್ಡ್ ಅಕೌಂಟೆಂಟ್ಸ್ ನವೀನ್ ಪ್ರಕಾರ, ಮಾರ್ಚ್ 30,2019 ರೊಳಗೆ ಆಧಾರ್ ಜೊತೆ ಪಾನ್ ಲಿಂಕ್ ಮಾಡದೆ ಹೋದಲ್ಲಿ ಪಾನ್ ಅಮಾನ್ಯವೆಂದು ಪರಿಗಣಿಸಲಾಗುತ್ತದೆ ಎನ್ನುತ್ತಾರೆ. ಆದಾಯ ತೆರಿಗೆ ಕಾಯಿದೆ, 1961 ರ ಸೆಕ್ಷನ್ 139 ಎಎ ಪ್ರಕಾರ, ಪಾನ್ ಅಮಾನ್ಯವಾಗಲಿದೆ. ಪಾನ್ ಕಾರ್ಡ್ ಹೊಂದಿದವರು ಐಟಿಆರ್ ಸಲ್ಲಿಸಲು ಸಾಧ್ಯವಾಗುವುದಿಲ್ಲ. ವ್ಯಕ್ತಿ ಸೂಕ್ತ ಪಾನ್ ಕಾರ್ಡ್ ಹೊಂದಿಲ್ಲ ಎಂದು ಪರಿಗಣಿಸಲಾಗುತ್ತದೆ.
ಶಾಲಿನಿ ಜೈನ್, ಪೀಪಲ್ ಎಡ್ವೈಜರಿ ಸರ್ವಿಸ್ ಪಾರ್ಟನರ್ ಪ್ರಕಾರ, 2016-2017ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಸಲ್ಲಿಸುವ ವೇಳೆ ಪಾನ್ ಜೊತೆ ಆಧಾರ್ ಲಿಂಕ್ ಮಾಡದಿರುವವರಿಗೆ ಇದು ಅನ್ವಯಿಸಲಿದೆ. 2016-2017, 2017-2018 ರ ಅವಧಿಯಲ್ಲಿ ತೆರಿಗೆ ಪಾವತಿ ವೇಳೆ ಆಧಾರ್ ಜೊತೆ ಪಾನ್ ಲಿಂಕ್ ಮಾಡಿದವರು ಈ ಗಡುವಿನ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎನ್ನುತ್ತಾರೆ. ವಾಸುದೇವ್ ಅವ್ರ ಪ್ರಕಾರ, ಸೆಕ್ಷನ್ 139ಎಎ(2)ರ ಅಡಿಯಲ್ಲಿ ಆಧಾರ್ ಜೊತೆ ಪಾನ್ ಲಿಂಕ್ ಗೆ ಯಾವುದೇ ಗಡುವು ನೀಡಿಲ್ಲ ಎನ್ನುತ್ತಾರೆ. ಆಧಾರ್ ಜೊತೆ ಪಾನ್ ಲಿಂಕ್ ಬಗ್ಗೆ ಬೇರೆ ಬೇರೆ ಅಭಿಪ್ರಾಯಗಳಿವೆ. ಆದ್ರೆ ಆಧಾರ್ ಜೊತೆ ಪಾನ್ ಲಿಂಕ್ ಮಾಡುವುದು ಒಳ್ಳೆಯದು. ಯಾಕೆಂದ್ರೆ ಸುಪ್ರೀಂ ಕೋರ್ಟ್, ಆಧಾರ್ ಜೊತೆ ಪಾನ್ ಲಿಂಕ್ ಕಡ್ಡಾಯ ಮಾಡಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…