Featured

ಆಧಾರ್ ಕಾರ್ಡ್ ನೊಂದಿಗೆ ಪಾನ್ ಕಾರ್ಡ್ ಲಿಂಕ್ ಮಾಡಲು ಮಾ.31 ಕೊನೆಯ ದಿನ – Vishwanews24

ನವದೆಹಲಿ,: ಆಧಾರ್ ಕಾರ್ಡ್ ನೊಂದಿಗೆ ಪಾನ್ ಕಾರ್ಡ್ ಲಿಂಕ್ ಮಾಡದೆ ಇದ್ದರೆ ಪಾನ್ ಅಮಾನ್ಯವೆಂದು ಪರಿಗಣಿಸಲಾಗಿದ್ದು, ಈ ಹಿನ್ನಲೆ ಮಾರ್ಚ್ 31ರೊಳಗೆ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಬೇಕಾಗಿದೆ.

ಪಾನ್ ಜೊತೆ ಆಧಾರ್ ಲಿಂಕ್ ಮಾಡದೆ ಹೋದ್ರೆ ಏನು ಸಮಸ್ಯೆಯಾಗುತ್ತದೆ ಎನ್ನುವ ಬಗ್ಗೆ ಚಾರ್ಟರ್ಡ್ ಅಕೌಂಟೆಂಟ್ಸ್ ಮತ್ತು ಕಾನೂನು ಪರಿಣಿತರು ಭಿನ್ನಾಭಿಪ್ರಾಯ ನೀಡಿದ್ದಾರೆ.

ಚಾರ್ಟರ್ಡ್ ಅಕೌಂಟೆಂಟ್ಸ್ ನವೀನ್ ಪ್ರಕಾರ, ಮಾರ್ಚ್ 30,2019 ರೊಳಗೆ ಆಧಾರ್ ಜೊತೆ ಪಾನ್ ಲಿಂಕ್ ಮಾಡದೆ ಹೋದಲ್ಲಿ ಪಾನ್ ಅಮಾನ್ಯವೆಂದು ಪರಿಗಣಿಸಲಾಗುತ್ತದೆ ಎನ್ನುತ್ತಾರೆ. ಆದಾಯ ತೆರಿಗೆ ಕಾಯಿದೆ, 1961 ರ ಸೆಕ್ಷನ್ 139 ಎಎ ಪ್ರಕಾರ, ಪಾನ್ ಅಮಾನ್ಯವಾಗಲಿದೆ. ಪಾನ್ ಕಾರ್ಡ್ ಹೊಂದಿದವರು ಐಟಿಆರ್ ಸಲ್ಲಿಸಲು ಸಾಧ್ಯವಾಗುವುದಿಲ್ಲ. ವ್ಯಕ್ತಿ ಸೂಕ್ತ ಪಾನ್ ಕಾರ್ಡ್ ಹೊಂದಿಲ್ಲ ಎಂದು ಪರಿಗಣಿಸಲಾಗುತ್ತದೆ.

ಶಾಲಿನಿ ಜೈನ್, ಪೀಪಲ್ ಎಡ್ವೈಜರಿ ಸರ್ವಿಸ್ ಪಾರ್ಟನರ್ ಪ್ರಕಾರ, 2016-2017ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಸಲ್ಲಿಸುವ ವೇಳೆ ಪಾನ್ ಜೊತೆ ಆಧಾರ್ ಲಿಂಕ್ ಮಾಡದಿರುವವರಿಗೆ ಇದು ಅನ್ವಯಿಸಲಿದೆ. 2016-2017, 2017-2018 ರ ಅವಧಿಯಲ್ಲಿ ತೆರಿಗೆ ಪಾವತಿ ವೇಳೆ ಆಧಾರ್ ಜೊತೆ  ಪಾನ್ ಲಿಂಕ್ ಮಾಡಿದವರು ಈ ಗಡುವಿನ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎನ್ನುತ್ತಾರೆ. ವಾಸುದೇವ್ ಅವ್ರ ಪ್ರಕಾರ, ಸೆಕ್ಷನ್ 139ಎಎ(2)ರ ಅಡಿಯಲ್ಲಿ ಆಧಾರ್ ಜೊತೆ ಪಾನ್ ಲಿಂಕ್ ಗೆ ಯಾವುದೇ ಗಡುವು ನೀಡಿಲ್ಲ ಎನ್ನುತ್ತಾರೆ. ಆಧಾರ್ ಜೊತೆ ಪಾನ್ ಲಿಂಕ್ ಬಗ್ಗೆ ಬೇರೆ ಬೇರೆ ಅಭಿಪ್ರಾಯಗಳಿವೆ. ಆದ್ರೆ ಆಧಾರ್ ಜೊತೆ ಪಾನ್ ಲಿಂಕ್ ಮಾಡುವುದು ಒಳ್ಳೆಯದು. ಯಾಕೆಂದ್ರೆ ಸುಪ್ರೀಂ ಕೋರ್ಟ್, ಆಧಾರ್ ಜೊತೆ ಪಾನ್ ಲಿಂಕ್ ಕಡ್ಡಾಯ ಮಾಡಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago