ಬೆಂಗಳೂರು : ಸಚಿವ ಆನಂದ್ ಸಿಂಗ್ ಅವರ ರಾಜೀನಾಮೆ ವಿಚಾರ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ರಾಜೀನಾಮೆ ವಿಚಾರ ಯಾವುದೂ ಇಲ್ಲ” ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಆನಂದ್ ಸಿಂಗ್ ನನಗೆ ಮೂರು ದಶಕಗಳಿಂದ ಮಿತ್ರ, ಅವರ ವಿಚಾರಗಳನ್ನು ಅವರು ನನ್ನಲ್ಲಿ ಹೇಳಿದ್ದಾರೆ. ನಾನು ಅವರ ಮಾತನ್ನು ಕೇಳಿದ್ದೇನೆ. ರಾಜೀನಾಮೆಯ ಪ್ರಸ್ತಾಪವೇ ಇಲ್ಲ” ಎಂದಿದ್ದಾರೆ.
ಇನ್ನು “ಆನಂದ್ ಸಿಂಗ್ ನನ್ನನ್ನು ಸಂಪರ್ಕ ಮಾಡಿ ಮಾತನಾಡಿದ್ದು, ರಾಜೀನಾಮೆ ಕೊಡುವ ವಿಚಾರದ ಕುರಿತು ಮಾತನಾಡಿಲ್ಲ. ಮತ್ತೆ ಭೇಟಿಯಾಗಿ ಎಂದು ಹೇಳಿದ್ದೇನೆ. ಅವರೊಂದಿಗೆ ಮಾತುಕತೆ ನಡೆದ ನಂತರ ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದ್ದಾರೆ.
“ಬಿಜೆಪಿಯಲ್ಲಿ ಯಾವುದೇ ರೀತಿಯಲ್ಲಿ ಗೊಂದಲವಿಲ್ಲ. ರಾಜೀನಾಮೆ ವಿಚಾರವಾಗಿ, ಖಾತೆಯ ವಿಚಾರವಾಗಿ ಪಕ್ಷ ಏನು ನಿರ್ಣಯ ತೆಗೆದುಕೊಂಡ ಮೇಲೆ ಎಲ್ಲವೂ ತಿಳಿಯುತ್ತದೆ. ನಾನು ಆ ಬಗ್ಗೆ ಚರ್ಚೆ ಮಾಡುತ್ತಿದ್ದೇನೆ” ಎಂದು ಹೇಳಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…