ಆನೇಕಲ್ : ನಿರ್ಮಾಣ ಹಂತದ ಕಾಂಕ್ರೀಟ್ ಕಾಮಗಾರಿ ವೇಳೆ ದುರಂತ; ಮೂವರು ಕಾರ್ಮಿಕರು ಸಾವು – vishwanews24
ಆನೇಕಲ್ : ನಿರ್ಮಾಣ ಹಂತದ ಕಾಂಕ್ರೀಟ್ ಕಾಮಗಾರಿ ವೇಳೆ ದುರಂತ; ಮೂವರು ಕಾರ್ಮಿಕರು ಸಾವು
ಆನೇಕಲ್: ನಿರ್ಮಾಣ ಹಂತದ ಕಾಂಕ್ರೀಟ್ ಕಾಮಗಾರಿ ವೇಳೆ ದುರಂತವೊಂದು ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಹೊಸೂರು ಸಮೀಪದ ಸಿಪ್ ಕಾಟ್ ಬಳಿ ನಡೆದಿದೆ.
ಖಾಸಗಿ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದು, ಕುಮರೇಶನ್(39), ಮೈಕೆಲ್(26), ಶ್ರೀನಿವಾಸನ್(26) ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಕೆಎಸ್ಆರ್ಟಿಸಿ ಪ್ರಯಾಣ ದರ ಹೆಚ್ಚಳ: ಉಡುಪಿ, ದಕ್ಷಿಣ ಕನ್ನಡ ಮಾರ್ಗಗಳ ದರಪಟ್ಟಿ – vishwanews24
ಕಾರ್ಖಾನೆಯ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕಾರ್ಮಿಕರು ಮೋಲ್ಡ್ಗೆ ಕಾಂಕ್ರೀಟ್ ಹಾಕುತ್ತಿದ್ದಾಗ ಸೆಂಟ್ರಿಂಗ್ಗೆ ಹಾಕಿದ್ದ ಮರಗಳು ಕುಸಿದು ಬಿದ್ದಿವೆ. ಪರಿಣಾಮ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸದ್ಯ ಗಾಯಗೊಂಡ ಕಾರ್ಮಿಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ದಿನೇಶ್, ಎಸ್ಪಿ ಅನಿತಾ ಭೇಟಿ ನೀಡಿದ್ದಾರೆ. ಕಾಮಗಾರಿ ವೇಳೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ದುರಂತ ಸಂಭವಿಸಿದೆ. ಸದ್ಯ ಪೊಲೀಸರು ಕ್ರೇನ್ಗಳ ಮೂಲಕ ಮೃತದೇಹಗಳನ್ನ ಹೊರತೆಗೆದಿದ್ದಾರೆ.
