ಹುಬ್ಬಳ್ಳಿ: ಆನ್ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ. ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಕೇಶ್ ಶ್ರೀಶೈಲ್ ಜಂಬಲದಿನ್ನಿ(21) ಮೃತ ವಿದ್ಯಾರ್ಥಿ. ಈತ ಬಿವಿಬಿ ಕಾಲೇಜಿನಲ್ಲಿ ಬಿಇ 6ನೇ ಸೆಮಿಸ್ಟರ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ವಾಸವಿದ್ದ.
ರಾಕೇಶ್ ಶ್ರೀಶೈಲ್ ತಾನು ವಾಸಿಸುತ್ತಿದ್ದ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಕೇಶ್ ನಿತ್ಯ ಆನ್ಲೈನ್ ಗೇಮ್ ಆಡುತ್ತಿದ್ದನು ಎಂದು ಹೇಳಲಾಗುತ್ತಿದೆ. ಹೀಗಾಗಿ ಆನ್ ಲೈನ್ ಗೇಮ್ನಲ್ಲಿ ಹಣವನ್ನು ಕಳೆದುಕೊಂಡಿದ್ದನು ಎನ್ನಲಾಗುತ್ತಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಸಾವಿನ ಹಿನ್ನೆಲೆ ಪೊಲೀಸ್ ಆಯುಕ್ತ ಶಶಿಕುಮಾರ್ ವಸತಿ ನಿಲಯಕ್ಕೆ ಭೇಟಿ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಕೋಣೆಯ ಪರಿಶೀಲನೆ ಮಾಡಿದ್ದಾರೆ.
ಆತ್ಮಹತ್ಯೆ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆ ಮುಟ್ಟುವುದರೊಳಗಾಗಿ ಆತ ಮೃತಪಟ್ಟಿದ್ದನು. ಸದ್ಯ ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…