Featured

ಆನ್​ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿ ; ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಆನ್​ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿ ; ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹುಬ್ಬಳ್ಳಿ: ಆನ್​ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ. ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಕೇಶ್ ಶ್ರೀಶೈಲ್ ಜಂಬಲದಿನ್ನಿ(21) ಮೃತ ವಿದ್ಯಾರ್ಥಿ. ಈತ ಬಿವಿಬಿ ಕಾಲೇಜಿನಲ್ಲಿ ಬಿಇ 6ನೇ ಸೆಮಿಸ್ಟರ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ವಾಸವಿದ್ದ.

ರಾಕೇಶ್ ಶ್ರೀಶೈಲ್ ತಾನು ವಾಸಿಸುತ್ತಿದ್ದ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಕೇಶ್ ನಿತ್ಯ ಆನ್​ಲೈನ್​ ಗೇಮ್ ಆಡುತ್ತಿದ್ದನು ಎಂದು ಹೇಳಲಾಗುತ್ತಿದೆ. ಹೀಗಾಗಿ ಆನ್ ಲೈನ್ ಗೇಮ್​ನಲ್ಲಿ ಹಣವನ್ನು ಕಳೆದುಕೊಂಡಿದ್ದನು ಎನ್ನಲಾಗುತ್ತಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.

ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಸಾವಿನ ಹಿನ್ನೆಲೆ ಪೊಲೀಸ್ ಆಯುಕ್ತ ಶಶಿಕುಮಾರ್ ವಸತಿ ನಿಲಯಕ್ಕೆ ಭೇಟಿ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಕೋಣೆಯ ಪರಿಶೀಲನೆ ಮಾಡಿದ್ದಾರೆ.

ಆತ್ಮಹತ್ಯೆ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆ ಮುಟ್ಟುವುದರೊಳಗಾಗಿ ಆತ ಮೃತಪಟ್ಟಿದ್ದನು. ಸದ್ಯ ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

6 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago