Featured

ಆನ್‌ಲೈನ್ ವಿಡಿಯೋ ಗೇಮ್ ಚಟ : ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಆನ್‌ಲೈನ್ ವಿಡಿಯೋ ಗೇಮ್ ಚಟ : ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ: ಆನ್‌ಲೈನ್ ವಿಡಿಯೋ ಗೇಮ್ ಚಟಕ್ಕೆ ಬಿದ್ದಿದ್ದ ನರ್ಸಿಂಗ್ ವಿದ್ಯಾರ್ಥಿಯೋರ್ವ ಅದರಿಂದ ಹೊರ ಬಾರಲಾರದೇ ಮಾನಸಿಕ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ವೀರಶೈವ ವಸತಿ ನಿಲಯದ ಆವರಣದಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರದ ಸೋಮನಾಥ ಚಿದ್ರೆ(22) ಆತ್ಮಹತ್ಯೆಗೆ ಮಾಡಿಕೊಂಡ ವಿದ್ಯಾರ್ಥಿ. ಈತ ಜಿಮ್ಸ್ ಆಸ್ಪತ್ರೆಯ ನರ್ಸಿಂಗ್ ಕೋರ್ಸ್‌ ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ಆನ್ ಲೈನ್ ನಲ್ಲಿ ಗೇಮ್ ಗಳನ್ನು ಆಡುವುದರಲ್ಲೇ ಬ್ಯುಸಿಯಾಗಿದ್ದ ಎನ್ನಲಾಗಿದೆ. ಇದರಿಂದ ಹೊರಬಾರಲಾಗದೆ ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆತನ ತಂದೆ ಸತೀಶಕುಮಾರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಹೊಲ ಮತ್ತು ಮನೆಯಲ್ಲಿರುವ ಚಿನ್ನ ಅಡವಿಟ್ಟು ಲಕ್ಷಾಂತರ ರೂ. ಸಾಲ ಮಾಡಿ ಮಗನ ವಿದ್ಯಾಭ್ಯಾಸಕ್ಕೆ ವ್ಯಯಿಸಿದ್ದೆ. ಆದರೆ ಆನ್‌ಲೈನ್ ವಿಡಿಯೋ ಚಟದಲ್ಲೇ ಮಗ ನಮ್ಮನ್ನು ಬಿಟ್ಟು ಅಗಲಿದ್ದಾನೆಂದು ದೂರಿನಲ್ಲಿ ವಿವರಿಸಿದ್ದಾರೆ.

ಈ ಕುರಿತು ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

8 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

8 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

8 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

8 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

9 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

9 hours ago