Categories: Featuredದೇಶ

ಆನ್​ಲೈನ್​ ಕ್ಲಾಸ್​ ತೆಗೆದುಕೊಂಡಿದ್ದ ಶಿಕ್ಷಕಿ ವಿರುದ್ಧ ಅಸಭ್ಯ ಕಾಮೆಂಟ್: ಜಾಲತಾಣದಲ್ಲಿ ಫೋಟೋ ವೈರಲ್​​,ಪ್ರಕರಣ ದಾಖಲು.

ತಿರುವನಂತಪುರಂ: ಆನ್​ಲೈನ್​ನಲ್ಲಿ ತರಗತಿ ನಡೆಸುತ್ತಿದ್ದ ಶಿಕ್ಷಕಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಾಮೆಂಟ್​ ಮಾಡಿದವರ ವಿರುದ್ಧ ಕೇರಳದ ಸೈಬರ್​ ಕ್ರೈಂ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೇರಳದ ಶಿಕ್ಷಣಕ್ಕಾಗಿ ಮೂಲಭೂತ ಸೌಕರ್ಯ ಮತ್ತು ತಂತ್ರಜ್ಞಾನ ಇಲಾಖೆಯ ಮುಖ್ಯ ಕಾರ್ಯದರ್ಶಿ ಅವರು ಎಡಿಜಿಪಿ ಮನೋಜ್​ ಅಬ್ರಾಹಂ ಅವರಿಗೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಕ್ರಮ ತೆಗದುಕೊಳ್ಳಲಾಗಿದೆ.

ಫೇಸ್​ಬುಕ್​, ಇನ್​ಸ್ಟಾಗ್ರಾಂ, ಯೂಟ್ಯೂಬ್​ ಮತ್ತು ವಾಟ್ಸ್​ಆಯಪ್​ಗಳಲ್ಲಿ ಶಿಕ್ಷಕಿ ವಿರುದ್ಧ ಅವಹೇಳನಕಾರಿಯಾಗಿ ಕಾಮೆಂಟ್​ ಮಾಡಿದ್ದು, ರಾಜ್ಯ ಯುವ ಆಯೋಗವು ಸಹ ಸುಮೊಟೊ ಪ್ರಕರಣ ದಾಖಲಿಸಿಕೊಂಡಿದೆ. ಯುವ ಆಯೋಗದ ಚೇರ್​ ಪರ್ಸನ್​ ಚಿಂಥ ಜೆರೊಮ್​ ಘಟನೆ ಸಂಬಂಧ ಕಿಡಿಕಾರಿದ್ದು, ಶಿಕ್ಷಕಿ ವಿರುದ್ಧ ಅಸಭ್ಯ ಕಾಮೆಂಟ್​ ಮಾಡಿದವರು ವಿಕೃತ ಮನಸ್ಸಿನವರು ಹಾಗೂ ಇದನ್ನು ಕೇರಳ ಒಪ್ಪುವುದಿಲ್ಲ. ಮತ್ತಿದು ನಮ್ಮ ಸಂಸ್ಕೃತಿಗೆ ವಿರುದ್ಧ ಎಂದು ಆಕ್ರೋಶ ಹೊರಹಾಕಿದ್ದಾರೆ.

ಆರೋಗ್ಯ ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರ ಮತ್ತು ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವಾಗ ಅವರನ್ನು ಅವಮಾನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸಾಧ್ಯವಾದಷ್ಟು ಬೇಗ ಅಪರಾಧಿಗಳನ್ನು ಬಂಧಿಸಿ ಕಾನೂನು ಕ್ರಮಗಳನ್ನು ತೆಗದುಕೊಳ್ಳಬೇಕೆಂದು ಯುವ ಆಯೋಗ ಆಗ್ರಹಿಸುತ್ತದೆ. ಕ್ರಮ ತೆಗೆದುಕೊಂಡ ಬಗ್ಗೆ ಎರಡು ವಾರಗಳಲ್ಲಿ ವರದಿ ಸಲ್ಲಿಸಲು ಆಯೋಗ ಕೇಳಿದೆ.

ಶಿಕ್ಷಕಿಯನ್ನು ಟ್ರೋಲ್​ ಮಾಡಿದ್ದಲ್ಲದೆ ಅವರ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​ ಮಾಡಿ ಅಸಭ್ಯವಾಗಿ ಕಾಮೆಂಟ್​ ಮಾಡಿರುವುದು ಗಮನಕ್ಕೆ ಬಂದಿದೆ. ಇದರೊಂದಿಗೆ ಶಿಕ್ಷಕಿಯ ಹೆಸರಿನಲ್ಲಿ ಅನೇಕ ನಕಲಿ ಖಾತೆಯು ಸಹ ಸೃಷ್ಟಿಸಲಾಗಿದೆ. ವಿಕ್ಟರ್​ ಚಾನಲ್​ ಹೆಸರಿನ ಯೂಟ್ಯೂಬ್​ ಚಾನಲ್​ನಲ್ಲೂ ಸಹ ಶಿಕ್ಷಕಿಯ ವಿಡಿಯೋಗೆ ಅಶ್ಲೀಲವಾಗಿ ಕಾಮೆಂಟ್​ ಮಾಡಿದ್ದಾರೆ. ಅನೇಕ ಕಾಮೆಂಟ್​ಗಳನ್ನು ವಿಕ್ಟರ್ಸ್​ ಚಾನಲ್​ ತೆಗೆದು ಹಾಕಿದೆ. (ಏಜೆನ್ಸೀಸ್​)

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

17 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

17 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

17 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

17 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

18 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

18 hours ago