Featured

ಆನ್​​ಲೈನ್​​​ನಲ್ಲಿ​​ ಔಷಧಿ ಮಾರಾಟ ನಿಷೇಧ..

ನವದೆಹಲಿ: ಔಷಧಗಳನ್ನು ಆನ್ ಲೈನ್ ಮೂಲಕ ಮಾರಾಟ ಮಾಡುವುದನ್ನು ನಿಷೇಧಿಸಿ ದೆಹಲಿ ಹೈಕೋರ್ಟ್ ಆದೇಶಿಸಿದ್ದು, ತಕ್ಷಣದಿಂದಲೇ ಇದನ್ನು ದೇಶಾದ್ಯಂತ ಜಾರಿಗೆ ತರಲು ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಆನ್​​ಲೈನ್​​ ಮೂಲಕ ಔಷಧಿ ಮಾರಾಟ ಮಾಡುವುದರ ಮೇಲೆ ನಿಷೇಧ ಹೇರಬೇಕು ಎಂದು ಡಾ.ಜಹೀರ್​​​ ಅಹಮ್ಮದ್​​ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಕೆ.ರಾವ್​​ ಮತ್ತು ರಾಜೇಂದ್ರ ಮೆನನ್​​​ ಇದ್ದ ದ್ವಿಸದಸ್ಯ ಪೀಠ ಆನ್​ಲೈನ್​ನಲ್ಲಿ ಔಷಧಿ ಮಾರಾಟಕ್ಕೆ ಸದ್ಯ ತಡೆಯಾಜ್ಞೆ ನೀಡಿದೆ..

ಈ ಹಿಂದೆ ಇದರ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ, ದೆಹಲಿ ಸರ್ಕಾರ ಮತ್ತು ಫಾರ್ಮಸಿ ಕೌನ್ಸಿಲ್​​​ ಆಫ್​​ ಇಂಡಿಯಾ ಹಾಗೂ ಸೆಂಟ್ರಲ್​​ ಡ್ರಗ್ಸ್​​​​ ಸ್ಟ್ಯಾಂಡರ್ಡ್​​ ಕಂಟ್ರೋಲ್​​ ಆರ್ಗನೈಸೇಷನ್​​ಗೆ ಹೈಕೋರ್ಟ್​​ ಸೂಚಿಸಿತ್ತು. ಸದ್ಯ ಆನ್​ಲೈನ್ ಮಾರಾಟಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, 2019ರ ಮಾರ್ಚ್​ 25ಕ್ಕೆ ವಿಚಾರಣೆಯನ್ನ​​ ಮುಂದೂಡಿದೆ.

ಆನ್ ಲೈನ್ ಮೂಲಕ ಔಷಧ ಮಾರಾಟದ ಉದ್ದೇಶ ಕೇವಲ ಲಾಭ ಗಳಿಸುವುದು ಮಾತ್ರ ಆಗಿರುತ್ತದೆ. ಇದರ ಪರಿಣಾಮ ಅನೇಕ ಜನರ ಆರೋಗ್ಯ ಸ್ಥಿತಿ ಹದಗೆಡುತ್ತದೆ. ಅಲ್ಲದೆ ಇದರ ಪರಿಣಾಮದಿಂದ ನಂತರ ವೈದ್ಯರಿಗೆ ಚಿಕಿತ್ಸೆ ನೀಡುವುದು ಕೂಡಾ ಸವಾಲಿನ ಕೆಲಸ ಆಗಿರುತ್ತದೆ ಎಂದು  ಪಿಐಎಲ್ ಸಲ್ಲಿಸಿದ್ದರು. .

ಆನ್​​​ಲೈನ್​ನಲ್ಲಿ ಅಕ್ರಮವಾಗಿ ಔಷಧಿ ಮಾರಾಟ, ಗ್ರಾಹಕರ ಆರೋಗ್ಯದ ಮತ್ತು ಮಾನಸಿಕ ನೆಮ್ಮದಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತೆ. ಅಲ್ಲದೇ ಔಷಧಿಗಳ ದುರ್ಬಳಕೆ ಕೂಡ ಹೆಚ್ಚಾಗುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago