ನವದೆಹಲಿ,: ‘ಕೋವಿನ್’ ಪೋರ್ಟಲ್‌ನಲ್ಲಿ ಲಸಿಕೆಗೆ ನೋಂದಣಿ ಮಾಡಿಸಿಕೊಳ್ಳುವುದು ಸರಿಯಲ್ಲ, ಇಂಟರ್‌ನೆಟ್ ಸೌಲಭ್ಯ ಇಲ್ಲದವರಿಗೂ ಲಸಿಕೆ ಪಡೆಯುವ ಹಕ್ಕಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಆನ್‌ಲೈನ್ ಮೂಲಕ ನೋಂದಣಿ ಕಡ್ಡಾಯ ಎಂಬುದು ಸರಿಯಲ್ಲ. ಲಸಿಕೆ ಕೇಂದ್ರಕ್ಕೆ ಬರುವ ಪ್ರತಿ ಅರ್ಹ ವ್ಯಕ್ತಿಗೂ ಲಸಿಕೆ ನೀಡಬೇಕು. ಇಂಟರ್‌ನೆಟ್ ಸೌಲಭ್ಯ ಹೊಂದಿರದವರೂ ಬದುಕುವ ಹಕ್ಕು ಹೊಂದಿದ್ದಾರೆ” ಎಂದಿದ್ದಾರೆ.
ಇನ್ನು ಕೊರೊನಾ ಲಸಿಕೆ ಪಡೆಯಲು ‘ಕೋವಿನ್’ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸುವುದನ್ನು ಕಡ್ಡಾಯಗೊಳಿಸಬಾರದು ಎಂದು ಕಾಂಗ್ರೆಸ್ ಮೊದಲಿನಿಂದಲೂ ಆಗ್ರಹಿಸುತ್ತಲೇ ಇದೆ.
ನಗರ ಪ್ರದೇಶಗಳಿಂದ ದೂರ ವಾಸಿಸುತ್ತಿರುವವರು, ಗ್ರಾಮೀಣ ಪ್ರದೇಶದವರು ಹಾಗೂ ಬಡವರಲ್ಲಿ ಸ್ಮಾರ್ಟ್‌ಫೋನ್ ಇರುವುದಿಲ್ಲ. ಡಿಜಿಟಲ್ ಸಂಪರ್ಕದಿಂದ ವಂಚಿರಿರುವವರಿಗೆ ಕೂಡ ಲಸಿಕೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…