Featured

ಆನ್‌ಲೈನ್ ಔಷಧ ವ್ಯಾಪಾರ ವಿರೋಧಿಸಿ ದೇಶಾದ್ಯಂತ ನಾಳೆ ಔಷಧ ಅಂಗಡಿಗಳು ಬಂದ್ ..

ಬೆಂಗಳೂರು: ಆನ್​ಲೈನ್​ನಲ್ಲಿ ಔಷಧ ಮಾರಾಟ ವಿರೋಧಿಸಿ ಔಷಧ ಮಾರಾಟಗಾರರು ಶುಕ್ರವಾರ (ಸೆ.28) ದೇಶವ್ಯಾಪಿ ಔಷಧ ಮಳಿಗೆಗಳ ಬಂದ್​ಗೆ ಕರೆ ನೀಡಿದ್ದಾರೆ. ಹೀಗಾಗಿ ರಾಜ್ಯದ ಜನತೆ ಗುರುವಾರವೇ ಅಗತ್ಯ ಔಷಧ ಖರೀದಿಸಿಟ್ಟು ಕೊಳ್ಳುವುದು ಉತ್ತಮ.

ಕೇಂದ್ರ ಸರ್ಕಾರ ಜಾರಿ ಗೊಳಿಸಲು ಮುಂದಾಗಿರುವ ಇ-ಫಾರ್ಮಸಿ ವ್ಯವಸ್ಥೆ ವಿರೋಧಿಸಿ ಆಲ್ ಇಂಡಿಯಾ ಆರ್ಗನೈಜೇಷನ್ ಆಫ್ ಕೆಮಿಸ್ಟ್ ಆಂಡ್ ಡ್ರಗ್ಗಿಸ್ಟ್ ಸಂಸ್ಥೆ ಒಂದು ದಿನ ಬಂದ್​ಗೆ ಕರೆ ನೀಡಿದೆ. ಹೀಗಾಗಿ ರಾಜ್ಯದಲ್ಲೂ ಕರ್ನಾಟಕ ಕೆಮಿಸ್ಟ್ ಆಂಡ್ ಡ್ರಗ್ಗಿಸ್ಟ್ ಸಂಸ್ಥೆ ಸಂಪೂರ್ಣ ಔಷಧ ಮಳಿಗೆಗಳು ಬಂದ್ ಆಗಲಿದೆ ಎಂದು ಸ್ಪಷ್ಟಪಡಿಸಿದೆ. ಆದ್ದರಿಂದ ವಿವಿಧ ಕಾಯಿಲೆಗೆ ನಿರಂತರವಾಗಿ ಮಾತ್ರೆ ಹಾಗೂ ಔಷಧ ಸೇವಿಸುತ್ತಿರುವವರು ಮುಂಜಾಗ್ರತೆ ಯಾಗಿ ಗುರುವಾರವೇ ಖರೀದಿ ಸಿಟ್ಟುಕೊಳ್ಳುವುದು ಉತ್ತಮ.

ಆತಂಕ ಬೇಡ: ರಾಜ್ಯದಲ್ಲಿ 24 ಸಾವಿರ ಔಷಧ ಮಾರಾಟಗಾರರಿದ್ದಾರೆ. ಇವರಲ್ಲಿ 6.5 ಸಾವಿರ ಮಂದಿ ಬೆಂಗಳೂರಿನಲ್ಲಿಯೇ ಮಳಿಗೆ ಹೊಂದಿದ್ದು, ಬಂದ್ ದಿನ ಸೇವೆ ಸ್ಥಗಿತಗೊಳಿಸಲಿದ್ದಾರೆ. ಆದರೆ, ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂ ಹಾಗೂ ಕಾಪೋರೇಟ್ ಆಸ್ಪತ್ರೆಗಳಿಗೆ ಹೊಂದಿಕೊಂಡಿರುವ ಔಷಧ ಮಳಿಗೆಗಳು ರೋಗಿಗಳ ಹಿತದೃಷ್ಟಿಯಿಂದ ತೆರೆದಿಡಲಿವೆ. ಇನ್ನು ಜನರಿಕ್ ಔಷಧ ಮಳಿಗೆಯೂ ತೆರೆದಿರಲಿದೆ. ಹೀಗಾಗಿ ರಾಜ್ಯದ ಎಲ್ಲೆಡೆ ಜೀವರಕ್ಷಕ ಔಷಧಗಳು ರೋಗಿಗಳಿಗೆ ಸಿಗಲಿದ್ದು, ಆತಂಕಪಡುವ ಅಗತ್ಯವಿಲ್ಲ.

ಔಷಧ ದಾಸ್ತಾನಿಗೆ ಸೂಚನೆ: ಔಷಧ ಮಳಿಗೆಗಳ ಮಾಲೀಕರು ಬಂದ್​ಗೆ ಕರೆ ನೀಡಿದ ಬೆನ್ನಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಅಗತ್ಯ ಜೀವರಕ್ಷಕ ಔಷಧವನ್ನು ದಾಸ್ತಾನು ಮಾಡಿಕೊಳ್ಳುವಂತೆ ರಾಜ್ಯದ ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ. ಜಿಲ್ಲಾ, ತಾಲೂಕು/ಸಾರ್ವಜನಿಕ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜೀವರಕ್ಷಕ ಔಷಧ ಸಿಗಲಿದೆ.

ಇ-ಫಾರ್ಮಸಿ ಯನ್ನು ಕೇಂದ್ರ ಸರ್ಕಾರ ಆತುರದಲ್ಲಿ ಜಾರಿಗೊಳಿಸಲು ಮುಂದಾಗಿದೆ. ರಾಜ್ಯದ ಎಲ್ಲ ಔಷಧ ಮಾರಾಟಗಾರರು ಮಳಿಗೆ ಬಂದ್ ಮಾಡಿ ಖಂಡಿಸಲಿದ್ದೇವೆ. ನ್ಯೂನತೆಯನ್ನು ಗ್ರಾಹಕರಿಗೆ ತಿಳಿಸುವುದು ನಮ್ಮ ಉದ್ದೇಶ.
ರಘುನಾಥ ರೆಡ್ಡಿ, ಕರ್ನಾಟಕ ಕೆಮಿಸ್ಟ್ ಆಂಡ್ ಡ್ರಗ್ಗಿಸ್ಟ್ ಸಂಸ್ಥೆ ಅಧ್ಯಕ್ಷ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago