ಬಹುಭಾಷಾ ನಟಿ ನಗ್ಮಾ ತಮ್ಮ ಮೊಬೈಲ್ಗೆ ಬಂದ ಲಿಂಕ್ವೊಂದನ್ನು ಕ್ಲಿಕ್ ಮಾಡಿ ಒಂದು ಲಕ್ಷ ರೂಪಾಯಿ ಹಣ ಕಳೆದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ನಟಿ ಹಾಗೂ ರಾಜಕಾರಣಿ, ಕನ್ನಡದಲ್ಲಿ ಕುರುಬನ ರಾಣಿ ಚಿತ್ರದಲ್ಲಿ ನಟಿಸಿದ್ದ ನಟಿ ನಗ್ಮಾ ಮೊರಾರ್ಜಿಗೆ ಸೈಬರ್ ವಂಚನೆ ಆಗಿದೆ.
ತಮ್ಮ ಮೊಬೈಲ್ಗೆ ಬಂದ ಸ್ಪಾಮ್ ಲಿಂಕ್ನ ಮೇಲೆ ಕ್ಲಿಕ್ ಮಾಡಿದ್ದರಿಂದ 1 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ವರದಿಯ ಪ್ರಕಾರ, ಫೆಬ್ರವರಿ 28 ರಂದು ನಟಿ ನಗ್ಮಾ 99,998 ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಬ್ಯಾಂಕ್ಗಳು ಕಳಿಸುವಂಥದ್ದೇ ನಂಬರ್ನಿಂದ ನಗ್ಮಾ ಅವರು ಸಂದೇಶವನ್ನು ಸ್ವೀಕರಿಸಿದ್ದರು. ಇತ್ತೀಚೆಗೆ ನಗ್ಮಾ ಮೊಬೈಲ್ಗೆ ಒಂದು ಲಿಂಕ್ ಮೆಸೇಜ್ ಬಂದಿದೆ.
ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ಧಾರೆ. ಹಣ ಕಳೆದುಕೊಂಡಿರುವುದಕ್ಕೆ ನಗ್ಮಾ ಬೇಸರ ವ್ಯಕ್ತಪಡಿಸಿದರೂ, ಮತ್ತೊಂದೆಡೆ ಸದ್ಯಕ್ಕೆ 1 ಲಕ್ಷ ಮಾತ್ರ ಕಳೆದುಕೊಂಡಿರುವ ನೆಮ್ಮದಿಯಲ್ಲಿದ್ದಾರಂತೆ.ಅದಲ್ಲದೆ, ಇದು ಯಾವುದೇ ಪ್ರೈವೇಟ್ ನಂಬರ್ ಕೂಡ ಆಗಿರಲಿಲ್ಲ ಎಂದು ನಗ್ಮಾ ಹೇಳಿದ್ದಾರೆ. ಬ್ಯಾಂಕ್ ಖಾತೆ ವಂಚನೆಯ ಮೂಲಕ ಕೆಲವೇ ದಿನಗಳಲ್ಲಿ ಹಲವಾರು ಲಕ್ಷ ರೂಪಾಯಿಗಳನ್ನು ವಂಚಿಸಿದ ಇತರ 80 ಸಂತ್ರಸ್ತರಲ್ಲಿ ನಗ್ಮಾ ಕೂಡ ಸೇರಿದ್ದಾರೆ. ಈ ಎಲ್ಲಾ ವ್ಯಕ್ತಿಗಳು ಒಂದೇ ಖಾಸಗಿ ಬ್ಯಾಂಕ್ನಲ್ಲಿ ಅಕೌಂಟ್ ಹೊಂದಿರುವವರಾಗಿದ್ದಾರೆ. ಅಲ್ಲದೆ, ನಟಿ ನಗ್ಮಾ, ಸೈಬರ್ ಮೋಸದ ಮಾಹಿತಿಯನ್ನೂ ಕೂಡ ಹಂಚಿಕೊಂಡಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…