Featured

ಆಪರೇಶನ್ ಕಮಲಕ್ಕೆ ಒಳಗಾಗಿದ್ದೇನೆ ಎನ್ನುವುದು ಸಾಬೀತಾದ್ರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ :ಕಾಂಗ್ರೆಸ್ ಶಾಸಕ ಉಮೇಶ ಜಾಧವ್ – Vishwanews24

ಕಲಬುರಗಿ : ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಶಾಸಕ ಉಮೇಶ ಜಾಧವ್ ಅಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎಂಬ ಸುದ್ಧಿ ಹರಿದಾಡುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ ಜಾಧವ್ ಅವರು, ‘ನಾನು 50 ಕೋಟಿ ರೂ.ಗೆ ಮಾರಾಟವಾಗಿದೀನಿ ಎನ್ನುವುದು ಸಾಬೀತಾದ್ರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕರು, ಆಪರೇಷನ್ ಕಮಲಕ್ಕೆ ಒಳಗಾಗಿದ್ದೇವೆಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಅವರ ಮೇಲೂ ಇಂತಹ ಆರೋಪ ಬಂದಿದೆ. ಹೀಗಾಗಿ ಅಧಿವೇಶನವೇ ಸರಿಯಾಗಿ ನಡೆಯಲಿಲ್ಲ. ಹಣ ಪಡೆದಿದ್ದೇವೆ ಎನ್ನುವ ಆರೋಪದಿಂದಾಗಿ ಮನಸ್ಸಿಗೆ ತುಂಬಾ ನೋವಾಗಿದೆ. ಇದರಿಂದಾಗಿ ಮಾನಸಿಕವಾಗಿ ನೊಂದಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ಈಗ ಕಾಂಗ್ರೆಸ್‍ನಲ್ಲಿ ಇದ್ದೇನೆ ಅಷ್ಟೇ. ಮುಂದೆ ಏನಾಗುತ್ತದೆ ಎನ್ನುವುದು ಗೊತ್ತಿಲ್ಲ. ಕಾಂಗ್ರೆಸ್ ನಾಯಕರು ನೋಟಿಸ್ ನೀಡಿದ್ದಾರೆ. ಅದಕ್ಕೆ ಸದ್ಯದಲ್ಲಿಯೇ ಉತ್ತರ ನೀಡುತ್ತೇನೆ. ನನ್ನನ್ನು ಸಮಾಧಾನಪಡಿಸಲು ಮಂತ್ರಿ ಸ್ಥಾನ ನೀಡುತ್ತೇನೆ ಎನ್ನುತ್ತಾರೆ. ಆದರೆ ನಾನೇ ಬೇಡವೆಂದು ಹೇಳುತ್ತಿರುವೆ. ಆಮಿಷಕ್ಕೆ ಒಳಗಾಗದರೆ ಕ್ಷೇತ್ರದ ಅಭಿವೃದ್ಧಿಯಾಗಲ್ಲ ಎಂದು ಮಂತ್ರಿಗಿರಿ ಆಕಾಂಕ್ಷೆಯನ್ನು ವ್ಯಕ್ತಪಡಿಸಿದರು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 day ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 day ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

1 day ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

1 day ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 day ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

1 day ago