ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಲಾಗಿದೆ. ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು ರಾತ್ರಿ ಟೆಲ್ ಅವಿವ್‌ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಲ್ ಅವಿವ್‌ನಿಂದ ದೆಹಲಿಗೆ ಚಾರ್ಟರ್ಡ್ ಫ್ಲೈಟ್ ಅನ್ನು ಕಳುಹಿಸಿರುವುದಾಗಿ ವಿದ್ಯಾರ್ಥಿಗಳಿಗೆ ಮೇಲ್ ಸಂದೇಶ ಕಳುಹಿಸಿದೆ. ಈ ವಿಮಾನ ಇಂದು ಇಸ್ರೇಲ್ ಕಾಲಮಾನ ರಾತ್ರಿ ಸುಮಾರು 9 ಗಂಟೆಗೆ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.
ಭಾರತೀಯ ವಿದ್ಯಾರ್ಥಿಗಳಿಗೆ ಮೇಲ್‌ನಲ್ಲಿ ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಲು ಕೇಳಲಾಗಿದೆ. ನಂತರ ಅವರು ದೃಢೀಕರಣ ಸಂದೇಶವನ್ನು ಸ್ವೀಕರಿಸುತ್ತಾರೆ. ಒಂದು ಚೆಕ್ ಇನ್ ಲಗೇಜ್ 23 ಕೆ.ಜಿ ಗಿಂತ ಹೆಚ್ಚಿರಬಾರದು ಮತ್ತು ಒಂದು ಕ್ಯಾಬಿನ್ ಲಗೇಜ್ ಅನ್ನು ಅನುಮತಿಸಲಾಗುವುದು ಎಂದು ಮೇಲ್‌ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಮಹಿಳೆಯರನ್ನ ರೇಪ್ ಮಾಡ್ತಿದ್ದಾರೆ, ಮಕ್ಕಳನ್ನ ಕೊಲ್ತಿದ್ದಾರೆ- ಹಮಾಸ್ ಉಗ್ರರ ಕರಾಳ ಮುಖ ಬಿಚ್ಚಿಟ್ಟ ಭಾರತದ ಇಸ್ರೇಲ್ ಮಹಿಳೆ
ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ ಬಳಿಕ ಎರಡೂ ಪ್ರದೇಶಗಳಲ್ಲಿ ಯುದ್ಧದ ಸ್ಥಿತಿ ತೀವ್ರಗೊಂಡಿದೆ. ಸಾವಿನ ಸಂಖ್ಯೆ 4,000ಕ್ಕೆ ಹತ್ತಿರವಾಗುತ್ತಿದ್ದಂತೆ ಭಾರತೀಯ ನಾಗರಿಕರನ್ನು ಇಸ್ರೇಲ್‌ನಿಂದ ಏರ್‌ಲಿಫ್ಟ್ ಮಾಡಲು ಭಾರತ ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…