ಆಪರೇಷನ್ ಕಮಲದ ಬಗ್ಗೆ ನಮಗೆ ಭಯವೇ ಇಲ್ಲ ಏಕೆಂದರೆ ಆಪರೇಷನ್ ಕಮಲ ಸಾಧ್ಯ ಇಲ್ಲ : ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಆಪರೇಷನ್ ಕಮಲದ ಬಗ್ಗೆ ನಮಗೆ ಭಯವೇ ಇಲ್ಲ ಏಕೆಂದರೆ ಆಪರೇಷನ್ ಕಮಲ ಸಾಧ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಈ ಹಿಂದೆಯೇ ಬಹುಮತ ಸಾಬೀತುಪಡಿಸಲು ಅವಕಾಶ ನೀಡಲಾಗಿತ್ತು. ಆದರೆ ಬಹುಮತ ಸಾಬೀತು ಮಾಡಲಾಗದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಜನರ ಮಾತು ಕೇಳಿ ಕೆಲಸ ಮಾಡ್ತಿದ್ದೀವಿ, ಯಡಿಯೂರಪ್ಪ ಮಾತು ಕೇಳುವುದಿಲ್ಲ, ಪ್ರಜಾಪ್ರಭುತ್ವದಲ್ಲಿ ಮೂರು ಮೂರು ತಿಂಗಳಿಗೊಮ್ಮೆ ಚುನಾವಣೆ ನಡೆಯಲಿ ಅಂತೇನಿಲ್ಲ ಎಂದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ದಿನದಿಂದ ಇಂದಿನವರೆಗೂ ಬಿಜೆಪಿ ವಿರೋಧ ಪಕ್ಷವಾಗಿ ಕೆಲಸ ಮಾಡದೇ ಕೇವಲ ಸರ್ಕಾರ ಬೀಳಿಸುವುದರಲ್ಲೇ ಮಗ್ನವಾಗಿದೆ. ಕಾಂಗ್ರೆಸ್ ಶಾಸಕರು ನಮ್ಮ ಜೊತೆಯಿದ್ದಾರೆ, ಕೆಲವು ಜೆಡಿಎಸ್ ಶಾಸಕರು ಬಿಜೆಪಿ ಸೇರುತ್ತಾರೆ, ನಾಳೆ ಸರ್ಕಾರ ಬೀಳಲಿದೆ, ತಿಂಗಳ ಅಂತ್ಯಕ್ಕೆ ಸರ್ಕಾರ ಬೀಳಲಿದೆ ಅಂತ ಬಿಜೆಪಿಯವರು ಹೇಳುತ್ತಲೇ ಬಂದಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಮೇಶ್ ಜಾರಕಿಹೊಳಿ ಬಿಟ್ಟು ಬೇರೆ ಯಾರು ಪಕ್ಷದ ವಿರುದ್ಧ ಹೇಳಿಕೆ ನೀಡಿಲ್ಲ , ರಮೇಶ ಜಾರಕಿಹೊಳಿ ಪಕ್ಷ ಬಿಡಲ್ಲ. ಅವರ ಜೊತೆ ಚರ್ಚೆ ನಡೆದಿದೆ. ನಾನೂ ಕೂಡ ಮಾತಾಡ್ತೇನೆ ರೋಷನ್ ಬೇಗ್ ಆಗ್ಲಿ ಯಾರೂ ಪಕ್ಷ ಬಿಡೊಲ್ಲ, ಅವರ ಅಸಮಧಾನ ಏನಿದ್ದರು ಪಕ್ಷದೊಳಗೆ ಚರ್ಚೆ ಮಾಡಿ ಬಗೆಹರಿಸುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು. ರಮೇಶ್ ಜಾರಕಿಹೊಳಿಯವರನ್ನ ಸಮಾಧಾನ ಪಡಿಸುವ ಕೆಲಸ ಮಾಡ್ತಿದ್ದೇವೆ.