ನವದೆಹಲಿ : ಯುದ್ಧಗ್ರಸ್ಥ ಉಕ್ರೇನ್‌ನಿಂದ ಭಾರತೀಯರನ್ನು ಕರೆತರುತ್ತಿದ್ದ ‘ಆಪರೇಷನ್ ಗಂಗಾ’ ವಿಮಾನದ ಕೊನೆಯ ಬ್ಯಾಚಿನ 6,711 ಭಾರತೀಯ ವಿದ್ಯಾರ್ಥಿಗಳೊಂದಿಗೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಹಂಗೇರಿಯಿಂದ ನವದೆಹಲಿಗೆ ವಾಪಸ್ಸಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹರ್ದೀಪ್ ಸಿಂಗ್ ಪುರಿ, ಭಾರತದ ಯುವ ಜನರು, ಇದೀಗ ತಮ್ಮ ತಮ್ಮ ಸ್ಥಳಗಳಿಗೆ ತೆರಳಬಹುದಾಗಿದೆ. ತಮ್ಮ ಪೋಷಕರು ಮತ್ತು ಕುಟುಂಬಸ್ಥರನ್ನು ಸೇರಬಹುದಾಗಿದೆ. ಬುಡಾಪೆಸ್ಟ್‌ನ ನಮ್ಮ 6, 711 ವಿದ್ಯಾರ್ಥಿಗಳ ಕೊನೆಯ ಬ್ಯಾಚ್‌ನೊಂದಿಗೆ ದೆಹಲಿಯನ್ನು ತಲುಪಲು ಸಂತೋಷವಾಗಿದೆ ಎಂದರು.
ಇನ್ನು ಖಾರ್ಕಿವ್ ಮತ್ತು ಸುಮಿಯನ್ನು ಹೊರತುಪಡಿಸಿ ಉಕ್ರೇನ್‌ನ ಉಳಿದ ಪ್ರದೇಶಗಳಿಂದ ಬಹುತೇಕ ಎಲ್ಲ ಭಾರತೀಯರನ್ನು ಸ್ಥಳಾಂತರಿಸಲಾಗಿದ್ದು, ಈ ವರೆಗೆ 16,000 ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ‘ಆಪರೇಷನ್ ಗಂಗಾ’ ಮೂಲಕ ಸ್ಥಳಾಂತರಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…