Featured

ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು : ಕೆ.ಎಸ್ ಈಶ್ವರಪ್ಪ ಆಕ್ರೋಶ – vishwanews24

ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು : ಕೆ.ಎಸ್ ಈಶ್ವರಪ್ಪ ಆಕ್ರೋಶ

ವಿಜಯಪುರ: ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಕಿಡಿಕಾರಿದರು.

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಕೊತ್ತೂರು ಮಂಜುನಾಥ್, ದಿನೇಶ್ ಗುಂಡೂರಾವ್‌ಗೆ ಗುಂಡು ಹೊಡೆಯಬೇಕು. ಇವರಿಗೆಲ್ಲಾ ಗುಂಡು ಹಾಕಿದರೆ ಮಾತ್ರ ಸರಿ ಹೋಗುತ್ತದೆ. ಇವರೆಲ್ಲಾ ದೇಶದ್ರೋಹಿಗಳು, ಇಂತಹ ದೇಶದ್ರೋಹಿಗಳಿಗೆ ಗುಂಡು ಹಾಕಬೇಕು. ಎಷ್ಟು ವಿಮಾನ ಪತನ ಆದವು ಎಂದು ಯುದ್ಧದ ಬಗ್ಗೆ ಸಾಕ್ಷಿ ಕೇಳ್ತಾರೆ ಎಂದು ವಾಗ್ದಾಳಿ ನಡೆಸಿದರು.

ಜೂನಿಯರ್ ಕಾಂಗ್ರೆಸ್ ನಾಯಕರು ಮಾತ್ರ ಟೀಕೆ ಮಾಡುತ್ತಿದ್ದಾರೆ. ಸೀನಿಯರ್ ಖರ್ಗೆ ವಿಧಿ ಇಲ್ಲದೆ ಅಲ್ಲೊಂದು ಇಲ್ಲೊಂದು ಮಾತನಾಡುತ್ತಾರೆ. ಆದ್ರೆ ಪಾಕಿಸ್ತಾನ ಪರವಾಗಿ ಮರಿ ಖರ್ಗೆ ಇದ್ದಾರೆ. ಹರಿಪ್ರಸಾದ್, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್ ಅವರಂತಹ ಕೆಲವರಿಗೆ ಮಾತ್ರ ಎಲ್ಲಿ ಇದ್ದೇವೆ. ಏನು ಮಾಡುತ್ತಿದ್ದೇವೆ. ಕಾಂಗ್ರೆಸ್ ನಾಯಕರು ಹೌದೋ, ಅಲ್ವೋ ಎಂದೇ ಗೊತ್ತಾಗುತ್ತಿಲ್ಲ. ಇವರ ಬಗ್ಗೆ ಕಾಂಗ್ರೆಸ್‌ನವರಿಂದಲೇ ಟೀಕೆ ಕೇಳಿಬರುತ್ತಿದೆ ಎಂದರು.

ಪ್ರೂಫ್ ಕೇಳೋಕೆ ಪ್ರಿಯಾಂಕ್ ಹಾಗೂ ಲಾಡ್ ಯಾರು? ಇವರಿಗೆ ಆಪರೇಷನ್ ಸಿಂಧೂರದ ಬಗ್ಗೆ ಏನು ಪ್ರೂಫ್ ಕೊಡಬೇಕು. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು, ಎಲ್ಲಾ ಪಕ್ಷದ ಸಭೆಗೆ ಹೋಗಿದ್ದಾರೆ. ಅವರನ್ನೇ ಕೇಳಲಿ ಇವರು. ಅವರು ಸಾಕ್ಷಿ ಕೊಟ್ಟೇ ಕೊಡ್ತಾರೆ ಎಂದು ಆಕ್ರೋಶ ಹೊರಹಾಕಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

19 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

22 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

22 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

22 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

22 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

23 hours ago