Featured

ಆಪ್‌ಗೆ ರಾಜೀನಾಮೆ ನೀಡಿದ್ದ ಕೈಲಾಶ್ ಗಹ್ಲೋಟ್ ಬಿಜೆಪಿ ಸೇರ್ಪಡೆ – vishwanews24

ಆಪ್‌ಗೆ ರಾಜೀನಾಮೆ ನೀಡಿದ್ದ ಕೈಲಾಶ್ ಗಹ್ಲೋಟ್ ಬಿಜೆಪಿಗೆ ಸೇರ್ಪಡೆ

ದೆಹಲಿ: ಒಂದು ದಿನದ ಹಿಂದಷ್ಟೇ ಆಮ್ ಆದ್ಮಿ ಪಕ್ಷ (ಎಎಪಿ) ತೊರೆದಿದ್ದ ಕೈಲಾಶ್ ಗಹ್ಲೋಟ್ ಅವರು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ವಿಧಾನಸಭಾ ಚುನಾವಣೆಗೆ ತಿಂಗಳುಗಳ ಬಾಕಿಯಿರುವಾಗ ದೆಹಲಿ ಸರ್ಕಾರದ ಹಿರಿಯ ಸಚಿವ ಮತ್ತು ಪಕ್ಷದ ನಾಯಕ ಕೈಲಾಶ್ ಗಹ್ಲೋಟ್ ಅವರು ಎಎಪಿ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಎಎಪಿ ಪಕ್ಷವು ಸ್ವಂತ ರಾಜಕೀಯ ಕಾರ್ಯಸೂಚಿಗಾಗಿ ಹೋರಾಡುತ್ತಿದೆ. ಇದರಿಂದಾಗಿ ದಿಲ್ಲಿಯ ಜನರಿಗೆ ಮೂಲಭೂತ ಸೇವೆಗಳನ್ನು ಒದಗಿಸುವ ನಮ್ಮ ಸಾಮರ್ಥ್ಯವನ್ನು ತೀವ್ರವಾಗಿ ದುರ್ಬಲಗೊಳಿಸಿದೆ. ನಾನು ಪಕ್ಷದಲ್ಲಿದ್ದರೂ ಅನೇಕ ಭರವಸೆಗಳನ್ನು ಈಡೇರಿಸಲಾಗಿಲ್ಲ. ಉದಾಹರಣೆಗೆ ಯಮುನಾ ನದಿಯನ್ನು ಶುಚಿಗೊಳಿಸುವುದಾಗಿ ಮಾತು ನೀಡಿದ್ದೆವು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾನು ದೆಹಲಿಯ ಜನರಿಗೆ ಸೇವೆ ಸಲ್ಲಿಸುವ ಬದ್ಧತೆಯೊಂದಿಗೆ ನನ್ನ ರಾಜಕೀಯ ಪ್ರಯಾಣ ಪ್ರಾರಂಭಿಸಿದ್ದೇನೆ. ನಾನು ಅದನ್ನು ಮುಂದುವರಿಸಲು ಬಯಸುತ್ತೇನೆ. ಹೀಗಾಗಿ ನನಗೆ ಎಎಪಿಯಿಂದ ಹಿಂದೆ ಸರಿಯುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಆದ್ದರಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

10 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

12 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

12 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

12 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

13 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

13 hours ago