ಮಂಗಳೂರು: ಆಪ್ತರ ವಲಯದಲ್ಲಿ ನನ್ನ ಅಭಿಪ್ರಾಯ ಹಂಚಿಕೊಂಡಿದ್ದು, ನನ್ನ ಜೊತೆಗಿರುವ ಆಪ್ತರೇ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸರ್ಕಾರದ ಅವಧಿಯ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆ ವಿಡಿಯೋ ವೈರಲ್ ಆಗಿತ್ತು. ಈ ಕುರಿತು ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಮೈಸೂರಿನ ಆಪ್ತರ ಜೊತೆ ಮಾತನಾಡಿದ್ದು, ನನ್ನನ್ನು ಭೇಟಿ ಮಾಡಲು ಬಂದ ಆಪ್ತರೊಂದಿಗೆ ನಾನು ಅಭಿಪ್ರಾಯ ಹಂಚಿಕೊಂಡಿದ್ದೆ. ಆದರೆ ಅದನ್ನು ರೆಕಾರ್ಡ್ ಮಾಡಿ ಮಾಧ್ಯಮಗಳಿಗೆ ನೀಡಿ ವೈರಲ್ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಕುರಿತು ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಆದರೆ ವಿವಾದವನ್ನು ಉಂಟು ಮಾಡಲು ಈ ರೀತಿ ಮಾಡಿದ್ದಾರೆ. ಸರ್ಕಾರದ ಕುರಿತು ಉದ್ದೇಶ ಪೂರ್ವಕವಾಗಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಅವರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಹೇಳಿದ್ದೇನು: ಸಿದ್ದರಾಮಯ್ಯ ಅವರ ಹೇಳಿಕೆ ವಿಡಿಯೋ ಮಂಗಳವಾರವಷ್ಟೇ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವ್ಯಕ್ತಿಯೊಬ್ಬರೊಂದಿಗೆ ಮಾತುಕತೆ ನಡೆಸುತ್ತಿದ್ದು, ಈ ವೇಳೆ ವ್ಯಕ್ತಿ ಸರ್ಕಾರದ ಅವಧಿಯ ಕುರಿತು ಪ್ರಶ್ನಿಸಿದ್ದಾರೆ. ಲೋಕಸಭಾ ಚುನಾವಣೆಯ ಮುಗಿದ ಬಳಿಕ ಸರ್ಕಾರದ ಕುರಿತು ಏನಾಗುತ್ತೇ ಎಂದು ನೋಡೋಣ. ಪಾರ್ಲಿಮೆಂಟ್ ಎಲೆಕ್ಷನ್ ವರೆಗೂ ಸರ್ಕಾರ ಇರುತ್ತೆ. ಪಾರ್ಲಿಮೆಂಟ್ ಎಲೆಕ್ಷನ್ ಬಳಿಕ ಏನು ಬೆಳವಣಿಗೆ ಆಗುತ್ತೆ ನೋಡೋಣ ಎಂದು ಹೇಳಿದ್ದರು.
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…