ಹುಬ್ಬಳ್ಳಿ: ಹೃದಯಾಘಾತದಿಂದ ಮೃತಪಟ್ಟ ಸ್ನೇಹಿತನ ಪಾರ್ಥಿವ ಶರೀರ ಕಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣೀರಿಟ್ಟಿದ್ದಾರೆ.
ಬಾಲ್ಯದಿಂದಲೂ ಆಪ್ತ ಸ್ನೇಹಿತ ಹಾಗೂ ಅಳಿಯನಾಗಿದ್ದ ರಾಜು ಪಾಟೀಲ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಇಂದು ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಸ್ನೇಹಿತನ ಅಂತಿಮ ದರ್ಶನ ಪಡೆದು ಬಿಕ್ಕಿ ಬಿಕ್ಕಿ ಅತ್ತರು.
ಹುಬ್ಬಳ್ಳಿಯ ಶಕ್ತಿನಗರದ ನಿವಾಸಿಯಾಗಿದ್ದ ರಾಜು ಪಾಟೀಲ ಮೃತಪಟ್ಟ ಪರಿಣಾಮ ಬಸವರಾಜ ಬೊಮ್ಮಾಯಿ ದುಃಖ ತೃಪ್ತರಾಗಿದ್ದು, ಅವರ ಈಡೀ ಕುಟುಂಬ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಿ ಕಣ್ಣೀರು ಸುರಿಸಿದರು.
ಪತ್ನಿ, ಪುತ್ರ, ಪುತ್ರಿ ಸಹೋದರಿಯೊಂದಿಗೆ ಹುಬ್ಬಳ್ಳಿಗೆ ಆಗಮಿಸಿರುವ ಬೊಮ್ಮಾಯಿ ರಾಜು ಪಾಟೀಲ ಪತ್ನಿ ಹಾಗೂ ಕುಟುಂಬಸ್ಥರನ್ನು ಸಮಾಧಾನಪಡಿಸಿದರು. ಸಂಜೆ ನಡೆಯುವ ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಬೊಮ್ಮಾಯಿ ಭಾಗವಹಿಸಲಿದ್ದಾರೆ.
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…