ದೆಹಲಿ: ಕಿರಿಯ ವಯಸ್ಸಿನಲ್ಲೇ ಬಣ್ಣದ ಲೋಕದಲ್ಲಿ ಮಿಂಚಿದ ನಟಿಯೊಬ್ಬಳು 19ರ ಹರೆಯದಲ್ಲೇ ಇಹಲೋಕ ತ್ಯಜಿಸಿದ್ದಾರೆ.
ಆಮಿರ್ ಖಾನ್ ಅಭಿನಯದ ʼದಂಗಲ್ʼ ಸಿನಿಮಾದಲ್ಲಿ ಯುವ ಬಬಿತಾ ಪೋಗಾಟ್ ಪಾತ್ರವನ್ನು ನಿರ್ವಹಿಸಿದ ಸುಹಾನಿ ಭಟ್ನಾಗರ್ (19) ಶನಿವಾರ(ಫೆ.17 ರಂದು) ದೆಹಲಿಯಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಆಗಿದ್ದೇನು?: ಕೆಲ ಸಮಯದ ಹಿಂದೆ ಸುಹಾನಿ ಭಟ್ನಾಗರ್ ಅವರ ಕಾಲು ಮುರಿತಕ್ಕೊಳಗಾಗಿತ್ತು. ಈ ಸಮಯದಲ್ಲಿ ಚಿಕಿತ್ಸೆಗಾಗಿ ಅವರು ಪಡೆದುಕೊಂಡ ಔಷಧಿಗಳು ಅವರ ಮೇಲೆ ಅಡ್ಡ ಪರಿಣಾಮ ಬೀರಿತ್ತು. ಈ ಕಾರಣದಿಂದ ಅವರ ದೇಹ ದ್ರವ ತುಂಬಿ ಊದಿಕೊಂಡಿತ್ತು. ಸುಹಾನಿ ಅವರನ್ನು ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ ಎಂದು ʼಜಾಗರಣ್ʼ ವರದಿ ತಿಳಿಸಿದೆ.
ಶನಿವಾರ(ಫೆ.17 ರಂದು) ಅವರ ಅಂತ್ಯಕ್ರಿಯೆ ಫರಿದಾಬಾದ್‌ನಲ್ಲಿ ನಡೆಯಲಿದೆ.
ʼದಂಗಲ್ʼ ಬಳಿಕ ಕೆಲ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಸುಹಾನಿ, ನಂತರ ಓದಿನ ಕಡೆ ಗಮನ ಹರಿಸುವ ನಿಟ್ಟಿನಲ್ಲಿ ನಟನೆಯಿಂದ ಬ್ರೇಕ್ ಪಡೆದುಕೊಂಡಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಸುಹಾನಿ ಅವರು ಅಷ್ಟಾಗಿ ಸಕ್ರೀಯವಾಗಿರಲಿಲ್ಲ. 2021 ರ ನವೆಂಬರ್ ಕೊನೆಯದಾಗಿ ಅವರು ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…