Featured

ಆಮಿರ್‌ ಖಾನ್‌ ಅಭಿನಯದ ದಂಗಲ್‌ ಚಿತ್ರದ ಬಾಲ ನಟಿ ಸುಹಾನಿ ಭಟ್ನಾಗರ್ ನಿಧನ – Vishwanews24

ಆಮಿರ್‌ ಖಾನ್‌ ಅಭಿನಯದ ದಂಗಲ್‌ ಚಿತ್ರದ ಬಾಲ ನಟಿ ಸುಹಾನಿ ಭಟ್ನಾಗರ್ ನಿಧನ

ದೆಹಲಿ: ಕಿರಿಯ ವಯಸ್ಸಿನಲ್ಲೇ ಬಣ್ಣದ ಲೋಕದಲ್ಲಿ ಮಿಂಚಿದ ನಟಿಯೊಬ್ಬಳು 19ರ ಹರೆಯದಲ್ಲೇ ಇಹಲೋಕ ತ್ಯಜಿಸಿದ್ದಾರೆ.

ಆಮಿರ್‌ ಖಾನ್‌ ಅಭಿನಯದ ʼದಂಗಲ್‌ʼ ಸಿನಿಮಾದಲ್ಲಿ ಯುವ ಬಬಿತಾ ಪೋಗಾಟ್‌ ಪಾತ್ರವನ್ನು ನಿರ್ವಹಿಸಿದ ಸುಹಾನಿ ಭಟ್ನಾಗರ್ (19) ಶನಿವಾರ(ಫೆ.17 ರಂದು) ದೆಹಲಿಯಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಆಗಿದ್ದೇನು?: ಕೆಲ ಸಮಯದ ಹಿಂದೆ ಸುಹಾನಿ ಭಟ್ನಾಗರ್ ಅವರ ಕಾಲು ಮುರಿತಕ್ಕೊಳಗಾಗಿತ್ತು. ಈ ಸಮಯದಲ್ಲಿ ಚಿಕಿತ್ಸೆಗಾಗಿ ಅವರು ಪಡೆದುಕೊಂಡ ಔಷಧಿಗಳು ಅವರ ಮೇಲೆ ಅಡ್ಡ ಪರಿಣಾಮ ಬೀರಿತ್ತು. ಈ ಕಾರಣದಿಂದ ಅವರ ದೇಹ ದ್ರವ ತುಂಬಿ ಊದಿಕೊಂಡಿತ್ತು. ಸುಹಾನಿ ಅವರನ್ನು ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ ಎಂದು ʼಜಾಗರಣ್‌ʼ ವರದಿ ತಿಳಿಸಿದೆ.
ಶನಿವಾರ(ಫೆ.17 ರಂದು) ಅವರ ಅಂತ್ಯಕ್ರಿಯೆ ಫರಿದಾಬಾದ್‌ನಲ್ಲಿ ನಡೆಯಲಿದೆ.

ʼದಂಗಲ್‌ʼ ಬಳಿಕ ಕೆಲ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಸುಹಾನಿ, ನಂತರ ಓದಿನ ಕಡೆ ಗಮನ ಹರಿಸುವ ನಿಟ್ಟಿನಲ್ಲಿ ನಟನೆಯಿಂದ ಬ್ರೇಕ್‌ ಪಡೆದುಕೊಂಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಸುಹಾನಿ ಅವರು ಅಷ್ಟಾಗಿ ಸಕ್ರೀಯವಾಗಿರಲಿಲ್ಲ. 2021 ರ ನವೆಂಬರ್‌ ಕೊನೆಯದಾಗಿ ಅವರು ಇನ್ಸ್ಟಾಗ್ರಾಮ್‌ ಪೋಸ್ಟ್‌ ಮಾಡಿದ್ದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

12 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

12 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago