Featured

ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ ವಕೀಲ ಜಗದೀಶ್ – Vishwanews24

ಇನ್ಮುಂದೆ ನನಗೂ, ಆದ್ಮಿ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ..

ಬೆಂಗಳೂರು, : ಕೆಲವು ತಿಂಗಳುಗಳ ಹಿಂದೆಯಷ್ಟೇ ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದ ವಕೀಲ ಜಗದೀಶ್ ಕೆ.ಎನ್. ಇಂದು (ಗುರುವಾರ) ಪಕ್ಷಕ್ಕೆ ದಿಢೀರ್ ಆಗಿ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ವಕೀಲ ಜಗದೀಶ್ ಕೆ.ಎನ್, “ಆಮ್ ಆದ್ಮಿ ಪಕ್ಷಕ್ಕೆ ಸೇರಿ ಪಕ್ಷ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ.

ಇಂದು ಅಧಿಕೃತವಾಗಿ ಆಮ್ ಆದ್ಮಿ ಪಕ್ಷ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಕರ್ನಾಟಕ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿಯವರಿಗೆ ತಲುಪಿಸಿದ್ದೇನೆ,” ಎಂದರು.

“ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳಿಗೂ ಈ ವಿಷಯ ಹೇಳುತ್ತಿದ್ದೇನೆ. ನನ್ನ ರಾಜೀನಾಮೆ ತಕ್ಷಣದಿಂದ ಕಾರ್ಯರೂಪಕ್ಕೆ ಬರಲಿದ್ದು, ಇನ್ಮುಂದೆ ನನಗೂ, ಆದ್ಮಿ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ,” ಎಂದು ವಿಡಿಯೋ ಹೇಳಿಕೆಯಲ್ಲಿ ವಕೀಲ ಜಗದೀಶ್ ಕೆ.ಎನ್ ತಿಳಿಸಿದ್ದಾರೆ.

ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಸಂದರ್ಭದಲ್ಲಿ “ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್‌ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ,” ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್‌. ಜಗದೀಶ್ ಮಹಾದೇವ್ ಹೇಳಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

2 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

4 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

4 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

4 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

5 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

5 hours ago