ಆಮ್ ಆದ್ಮಿ ಪಕ್ಷದ ಮೂವರು ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ – Vishwanews24
ಪ್ರಧಾನಿ ಮೋದಿಯವರ ಕೆಲಸ- ಕಾರ್ಯಗಳಿಂದ ಪ್ರೇರಿತವಾಗಿ ಬಿಜೆಪಿ ಸೇರ್ಪಡೆ
ಚಂಡೀಗಢ: ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ನ ಮೂವರು ಆಮ್ ಆದ್ಮಿ ಪಕ್ಷದ ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಕೌನ್ಸಿಲರ್‌ಗಳಾದ ಪೂನಂ ದೇವಿ, ನೇಹಾ ಮುಸಾವತ್ ಮತ್ತು ಗುರ್ಚರಣ್ ಕಲಾ ಅವರು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಚುನಾವಣೆಯಲ್ಲಿ ಅಕ್ರಮಗಳ ಆರೋಪದ ನಂತರ ಹೊಸದಾಗಿ ಚುನಾಯಿತರಾದ ಮೇಯರ್ ಮನೋಜ್ ಸೋಂಕರ್ ಅವರು ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನವೇ ಈ ಬೆಳವಣಿಗೆ ನಡೆದಿದೆ.
ಈ ಕುರಿತು ಪ್ರತಿಕ್ರಿಯಿಸಿದ ನೇಹಾ ಮುಸಾವತ್, ಪೂನಂ ದೇವಿ, ಎಎಪಿ ನಮಗೆ ಸುಳ್ಳು ಭರವಸೆಗಳನ್ನು ನೀಡಿದೆ. ಇಂದು, ಪ್ರಧಾನಿ ಮೋದಿಯವರ ಕೆಲಸ- ಕಾರ್ಯಗಳಿಂದ ಪ್ರೇರಿತವಾಗಿ ಬಿಜೆಪಿಗೆ ಸೇರಿದ್ದೇನೆ ಎಂದು ಹೇಳಿದರು. ಇನ್ನು ಪ್ರಧಾನಿ ಮೋದಿಯವರು ಮಾಡಿದ ಕೆಲಸಗಳಿಂದ ಸ್ಫೂರ್ತಿ ಪಡೆದು ಬಿಜೆಪಿಗೆ ಸೇರಿದ್ದಾಗಿ ತಿಳಿಸಿದರು.
