ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣರವರು ಆಮ್ ಆದ್ಮಿ ಪಾರ್ಟಿಗೆಗುರುವಾರ ಸೇರ್ಪಡೆಯಾದರು. ಹೊಟೇಲ್ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಕೃಷ್ಣರವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಎಎಪಿ ಸೇರ್ಪಡೆ ಬಳಿಕ ಮಾತನಾಡಿದ ಟೆನ್ನಿಸ್ ಕೃಷ್ಣ, ‘ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್ ಆದ್ಮಿ ಪಾರ್ಟಿ ಯಶಸ್ವಿಯಾಗುತ್ತಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಸಾಧಿಸಿ ತೋರಿಸಿರುವ ಎಎಪಿಯು ಈಗ ಪಂಜಾಬ್‌ನಲ್ಲೂ ಮೋಡಿ ಮಾಡುತ್ತಿದೆ. ಭ್ರಷ್ಟ ಪಕ್ಷಗಳನ್ನು ಬದಿಗೊತ್ತಿ ದೇಶವನ್ನು ಕಾಪಾಡಲು ಎಎಪಿಯಿಂದ ಮಾತ್ರ ಸಾಧ್ಯ. ಸಾಮಾನ್ಯ ಜನರ ಬಗ್ಗೆ ಅಪಾರ ಕಾಳಜಿಯುಳ್ಳ ಆಮ್ ಆದ್ಮಿ ಪಾರ್ಟಿಯ ಮೂಲಕ ರಾಜಕೀಯ ಪ್ರವೇಶಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಎಎಪಿಯನ್ನು ಬಳಸಿಕೊಂಡು ದೇಶದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಪ್ರವೇಶಿಸಬೇಕು’ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಸಂಚಿತ್ ಸೆಹ್ವಾನಿ , ಜಗದೀಶ್ ವಿ .ಸದಂ , ಪುರುಷೋತ್ತಮ್ ,ಸುರೇಶ್ ರಾಥೋಡ್, ಉಷಾ ಮೋಹನ್, ಚನ್ನಪ್ಪಗೌಡ ನೆಲ್ಲೂರು, ಜ್ಯೋತಿಷ್ ಕುಮಾರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…