Featured

ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಖ್ಯಾತ ವಕೀಲ ಜಗದೀಶ್ ಮಹಾದೇವ್‍ – Vishwanews24

  • ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಖ್ಯಾತ ವಕೀಲ ಜಗದೀಶ್ ಮಹಾದೇವ್‍..

  • ಆಮ್ ಆದ್ಮಿ ಪಕ್ಷ ಸೇರ್ಪಡೆಯಿಂದ ನನ್ನ ಹೋರಾಟದ ಶಕ್ತಿ ಹೆಚ್ಚಾಗಲಿದೆ..

  • ಭ್ರಷ್ಟ ಹಾಗೂ ಕೋಮುವಾದಿ ನಾಯಕರುಗಳೇ ತುಂಬಿರುವ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಪ್ರತಿಜ್ಞೆ ಮಾಡಬೇಕು..

  • ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ ಹಾಗಾಗಿ ಎಎಪಿಗೆ ಸೇರ್ಪಡೆ : ಜಗದೀಶ್ ಮಹಾದೇವ್‍ – Vishwanews24

ಬೆಂಗಳೂರು: ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ ಹಾಗಾಗಿ ಎಎಪಿಗೆ ಸೇರ್ಪಡೆಗೊಂಡಿದ್ದೇನೆ ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್.ಜಗದೀಶ್ ಮಹಾದೇವ್‍ರವರು ಹೇಳಿದ್ದಾರೆ.

ಬೆಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ ನಡೆದ ಸಮಾರಂಭದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸುಮಾರು ಹತ್ತು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತಿದ್ದೇನೆ. ಇದಕ್ಕಾಗಿ ದೊಡ್ಡದೊಡ್ಡ ರಾಜಕಾರಣಿಗಳನ್ನು ಎದುರು ಹಾಕಿಕೊಂಡು ಮುನ್ನಡೆಯುತ್ತಿದ್ದೇನೆ. ಅನೇಕ ಸಂದರ್ಭಗಳಲ್ಲಿ ಕಾರ್ಮಿಕರು, ರೈತರು ಹಾಗೂ ಯುವಜನತೆಯ ನ್ಯಾಯಯುತ ಹೋರಾಟಕ್ಕೆ ಬೆಂಬಲವಾಗಿ ನಿಂತ ತೃಪ್ತಿಯಿದೆ. ನನ್ನಂತೆಯೇ ಎಎಪಿ ಕೂಡ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದು, ಪಕ್ಷ ಸೇರ್ಪಡೆಯಿಂದ ನನ್ನ ಹೋರಾಟದ ಶಕ್ತಿ ಹೆಚ್ಚಾಗಲಿದೆ. ಪಕ್ಷಕ್ಕೂ ನನ್ನಿಂದ ಅನುಕೂಲವಾಗುವ ದೃಢ ವಿಶ್ವಾಸವಿದೆ ಎಂದು ಹೇಳಿದರು.

ದೆಹಲಿಯ ಕೇಜ್ರಿವಾಲ್ ಸರ್ಕಾರವು ಜನಪರ ಆಡಳಿತ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ಜನವಿರೋಧಿ ಆಡಳಿತ ನೀಡುತ್ತಿದೆ. ಕೇಜ್ರಿವಾಲ್ ಆಡಳಿತದಲ್ಲಿ ಕುಡಿಯುವ ನೀರು, ವಿದ್ಯುತ್, ವೈದ್ಯಕೀಯ ಸೌಲಭ್ಯ ಮುಂತಾದವುಗಳು ಒಂದು ಮಿತಿಯವರೆಗೆ ಉಚಿತವಾಗಿ ಸಿಗುತ್ತಿದೆ. ಆದರೆ ಮೋದಿ ಸರ್ಕಾರವು ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆಯನ್ನು ಮನಬಂದಂತೆ ಹೆಚ್ಚಿಸುವ ಮೂಲಕ ಸಾಮಾನ್ಯ ಜನರನ್ನು ಹೈರಾಣಾಗಿಸುತ್ತಿದೆ. ಇದರ ವಿರುದ್ಧ ಹೋರಾಡಲು ಯುವಜನತೆ ಮುಂದಾಗಬೇಕು. ಭ್ರಷ್ಟ ಹಾಗೂ ಕೋಮುವಾದಿ ನಾಯಕರುಗಳೇ ತುಂಬಿರುವ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಪ್ರತಿಜ್ಞೆ ಮಾಡಬೇಕು ಎಂದು ಕೆ.ಎನ್.ಜಗದೀಶ್ ಹೇಳಿದರು.

ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ, ಹಿರಿಯ ಮುಖಂಡರಾದ ಲಕ್ಷ್ಮೀಕಾಂತ್ ರಾವ್, ನಂಜಪ್ಪ ಕಾಳೇಗೌಡ, ಕುಶಲಸ್ವಾಮಿ, ಉಷಾ ಮೋಹನ್, ಬಿ.ಟಿ.ನಾಗಣ್ಣ, ಸುರೇಶ್ ರಾಥೋಡ್, ಜಗದೀಶ್ ವಿ. ಸದಂ ಹಾಗೂ ಇತರೆ ಮುಖಂಡರು ಮತ್ತು ಕೆ.ಎನ್.ಜಗದೀಶ್‍ರವರ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿದ್ದರು.

ಕುಂದಾಪುರ: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಶಂಕರನಾರಾಯಣ ಶಾಖೆ ಉದ್ಘಾಟನೆ – Vishwanews24

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

6 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

7 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

8 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

9 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

9 hours ago