ಬೆಂಗಳೂರು: ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ ಹಾಗಾಗಿ ಎಎಪಿಗೆ ಸೇರ್ಪಡೆಗೊಂಡಿದ್ದೇನೆ ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್.ಜಗದೀಶ್ ಮಹಾದೇವ್‍ರವರು ಹೇಳಿದ್ದಾರೆ.
ಬೆಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ ನಡೆದ ಸಮಾರಂಭದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸುಮಾರು ಹತ್ತು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತಿದ್ದೇನೆ. ಇದಕ್ಕಾಗಿ ದೊಡ್ಡದೊಡ್ಡ ರಾಜಕಾರಣಿಗಳನ್ನು ಎದುರು ಹಾಕಿಕೊಂಡು ಮುನ್ನಡೆಯುತ್ತಿದ್ದೇನೆ. ಅನೇಕ ಸಂದರ್ಭಗಳಲ್ಲಿ ಕಾರ್ಮಿಕರು, ರೈತರು ಹಾಗೂ ಯುವಜನತೆಯ ನ್ಯಾಯಯುತ ಹೋರಾಟಕ್ಕೆ ಬೆಂಬಲವಾಗಿ ನಿಂತ ತೃಪ್ತಿಯಿದೆ. ನನ್ನಂತೆಯೇ ಎಎಪಿ ಕೂಡ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದು, ಪಕ್ಷ ಸೇರ್ಪಡೆಯಿಂದ ನನ್ನ ಹೋರಾಟದ ಶಕ್ತಿ ಹೆಚ್ಚಾಗಲಿದೆ. ಪಕ್ಷಕ್ಕೂ ನನ್ನಿಂದ ಅನುಕೂಲವಾಗುವ ದೃಢ ವಿಶ್ವಾಸವಿದೆ ಎಂದು ಹೇಳಿದರು.
ದೆಹಲಿಯ ಕೇಜ್ರಿವಾಲ್ ಸರ್ಕಾರವು ಜನಪರ ಆಡಳಿತ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ಜನವಿರೋಧಿ ಆಡಳಿತ ನೀಡುತ್ತಿದೆ. ಕೇಜ್ರಿವಾಲ್ ಆಡಳಿತದಲ್ಲಿ ಕುಡಿಯುವ ನೀರು, ವಿದ್ಯುತ್, ವೈದ್ಯಕೀಯ ಸೌಲಭ್ಯ ಮುಂತಾದವುಗಳು ಒಂದು ಮಿತಿಯವರೆಗೆ ಉಚಿತವಾಗಿ ಸಿಗುತ್ತಿದೆ. ಆದರೆ ಮೋದಿ ಸರ್ಕಾರವು ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆಯನ್ನು ಮನಬಂದಂತೆ ಹೆಚ್ಚಿಸುವ ಮೂಲಕ ಸಾಮಾನ್ಯ ಜನರನ್ನು ಹೈರಾಣಾಗಿಸುತ್ತಿದೆ. ಇದರ ವಿರುದ್ಧ ಹೋರಾಡಲು ಯುವಜನತೆ ಮುಂದಾಗಬೇಕು. ಭ್ರಷ್ಟ ಹಾಗೂ ಕೋಮುವಾದಿ ನಾಯಕರುಗಳೇ ತುಂಬಿರುವ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಪ್ರತಿಜ್ಞೆ ಮಾಡಬೇಕು ಎಂದು ಕೆ.ಎನ್.ಜಗದೀಶ್ ಹೇಳಿದರು.
ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ, ಹಿರಿಯ ಮುಖಂಡರಾದ ಲಕ್ಷ್ಮೀಕಾಂತ್ ರಾವ್, ನಂಜಪ್ಪ ಕಾಳೇಗೌಡ, ಕುಶಲಸ್ವಾಮಿ, ಉಷಾ ಮೋಹನ್, ಬಿ.ಟಿ.ನಾಗಣ್ಣ, ಸುರೇಶ್ ರಾಥೋಡ್, ಜಗದೀಶ್ ವಿ. ಸದಂ ಹಾಗೂ ಇತರೆ ಮುಖಂಡರು ಮತ್ತು ಕೆ.ಎನ್.ಜಗದೀಶ್‍ರವರ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿದ್ದರು.
ಕುಂದಾಪುರ: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಶಂಕರನಾರಾಯಣ ಶಾಖೆ ಉದ್ಘಾಟನೆ – Vishwanews24
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…