ಮಂಗಳೂರು: ಆಯೋಧ್ಯೆ ತೀರ್ಪನ್ನು ಸಾರ್ವಜನಿಕರು ಸಕಾರಾತ್ಮಕವಾಗಿ ತೆಗೆದುಕೊಳ್ಳಬೇಕು, ಯಾವುದೇ ಅಶಾಂತಿಗೆ ಕಾರಣವಾಗಬಾರದು ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೇಸ್ ಮುಖಂಡ ಬಿ.ಜನಾರ್ಧನ ಪೂಜಾರಿ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ತನ್ನ ತೀರ್ಪು ಪ್ರಕಟಿಸಲಿದ್ದು, ತೀರ್ಪನ್ನು ಎಲ್ಲಾ ಸಮಾಜ ಸಕಾರಾತ್ಮಕವಾಗಿ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ ಪೂಜಾರಿ ಬಿಜೆಪಿ ಪಕ್ಷ ಅಪರೇಶನ್ ಕಮಲದ ಮೂಲಕ ಮೈತ್ರಿ ಸರಕಾರವನ್ನು ಬೀಳಿಸಿದ್ದು, ಈ ಕುರಿತ ಮುಖ್ಯಮಂತ್ರಿ ಯಡಿಯೂರಪ್ಪ ರ ಆಡಿಯೋ ಕೂಡಾ ಬಿಡುಗಡೆಯಾಗಿದೆ. ಸುಪ್ರೀಂಕೋರ್ಟ್ ಕೂಡಾ ಈ ಆಡಿಯೋವನ್ನು ಪುರಾವೆಯಾಗಿಯೂ ಪರಿಗಣಿಸಲಿರುವ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಯಡಿಯೂರಪ್ಪ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೇಸ್ ಪಕ್ಷ ಟಿಕೆಟ್ ಹಂಚಿಕೆಯಲ್ಲಿ ಭಾರೀ ಗೊಂದಲ ಉಂಟುಮಾಡಿದ್ದು, ಇದರ ಪ್ರಯೋಜನವನ್ನು ಬಿಜೆಪಿ ಪಕ್ಷ ಪಡೆಯಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…