ಮಂಗಳೂರು: ಎನ್ ಐ ಟಿ ಕೆಯ ವಿದ್ಯಾರ್ಥಿಯೊಬ್ಬ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಶನಿವಾರ ರಾತ್ರಿ ವೇಳೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಹಾರಾಷ್ಟ್ರದ ಆನಂದ ಪಾಠಕ್ ಎಂದು ಗುರುತಿಸಲಾಗಿದೆ.
ಈತ ಮೂರನೇ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಯಾಗಿದ್ದಾನೆ. ಪಠ್ಯೇತರ ಚಟುವಟಿಕೆ ಯಾದ ಮ್ಯೂಸಿಕಲ್ ಕ್ಲಬ್ ನ ತರಗತಿಗಾಗಿ 6ನೆಯ ಮಹಡಿಗೆ ತೆರಳಿದ್ದ. ಮೆಕ್ಯಾನಿಕಲ್ ವಿಭಾಗದ ಪ್ರೊಫೆಸರ್ ಒಬ್ಬರು ಹಾಜರಾತಿ ಕೊರತೆಯ ಕುರಿತಂತೆ ವಿದ್ಯಾರ್ಥಿ ಆನಂದ್ ಪಾಠಕ್ಕೆ ಗಂಭೀರವಾದ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
ಈ ಕಾರಣದಿಂದಲೇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಇನ್ನು ಕಾಲೇಜು ವಿದ್ಯಾರ್ಥಿಯ ವಿಚಾರದಲ್ಲಿ ಕೈಗೊಂಡ ನಿರ್ಧಾರದಿಂದಾಗಿ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪ್ರತಿಭಟನೆ ಕೂಡ ನಡೆಸಿದ್ದಾರೆ.
ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…