Featured

ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂ ಶುಪಾಲರನ್ನು ನೇರ ನೇಮಕಾತಿ: ಡಾ.ಸಿ.ಎನ್.ಅಶ್ವತ್ಥನಾರಾಯಣ- vishwanews24

ಬೆಂಗಳೂರು: ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆಗೆ ರಾಷ್ಟ್ರೀ ಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರಕಾರವು ಇನ್ನು ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂ ಶುಪಾಲರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾ ರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂದರ್ಶನ ಇಲ್ಲದೆಯೇ ಲಿಖಿತ ಪರೀಕ್ಷೆ ಮೂಲಕವೇ ಇಷ್ಟೂ ಹುದ್ದೆಗಳನ್ನು ತುಂಬಲಾಗುತ್ತಿದೆ ಎಂದರು. ಈ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಆರು ತಿಂಗಳ ಒಳಗಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದಲ್ಲದೆ, ಎಲ್ಲ ಪ್ರಕ್ರಿಯೆ ಪಾರದರ್ಶಕವಾಗಿರುತ್ತದೆ. ಅರ್ಹತೆ ಆಧಾರದ ಮೇಲೆಯೇ ಇಡೀ ನೇಮಕಾತಿ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ. 2009ರ ನಂತರ ಪ್ರಾಂ ಶು ಪಾಲರನ್ನು ನೇಮಕಾತಿ ಮಾಡಿರಲಿಲ್ಲ. ಇದಕ್ಕೆ 55 ವರ್ಷ ವಯೋಮಿತಿ ಇದೆ. ಅದೇ 2017ರ ನಂತರ ಸಹಾಯಕ ಪ್ರಾಧ್ಯಾಪಕರ ನೇಮಕವೂ ಆಗಿರಲಿಲ್ಲ ಎಂದ ಅವರು, ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ 500 ಅಂಕಕ್ಕೆ ನಡೆಯುತ್ತದೆ. (ಕನ್ನಡ 100, ಇಂಗ್ಲಿಷ್ 100, ಜಿಕೆ 50 ಆಯ್ಕೆ ವಿಷಯಗಳಿಗೆ 250 ಅಂಕ ಇರುತ್ತದೆ.) ಪ್ರಾಂ ಶುಪಾಲರ ಆಯ್ಕೆ ಪರೀಕ್ಷೆ 100 ಅಂಕ ಇರುತ್ತದೆ. ಎಲ್ಲ ಪ್ರಶ್ನೆಗಳು ಬಹುಆಯ್ಕೆ ಮಾದರಿಯಲ್ಲಿ ಇರುತ್ತವೆ. ಪ್ರಾಥಮಿಕ ಅರ್ಹತೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿರುತ್ತದೆ ಎಂದು ಅವರು ಮಾಹಿತಿ ನೀಡಿದರು. ಅರ್ಹತೆಯನ್ನು ಹೊರತುಪಡಿಸಿ ಬೇರೆ ಯಾವ ಮಾನದಂಡವೂ ಈ ನೇಮಕಾತಿಯಲ್ಲಿ ಇರುವುದಿಲ್ಲ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇ ಶದಿಂದ ಈ ಕ್ರಮ ವಹಿಸಲಾಗಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago