ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
“ಹಿಂದೂ ಧರ್ಮವೂ ನೋಂದಣಿಯಾಗಿಲ್ಲ” ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಎಕ್ಸ್ ಪೋಸ್ಟ್ ಮಾಡಿರುವ ಅವರು, ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ತತ್ವಶಾಸ್ತ್ರ ಮತ್ತು ವೈವಿಧ್ಯತೆಯನ್ನು ಹೊಂದಿರುವ ಹಿಂದೂ ಧರ್ಮವನ್ನು ಒಂದು ನಿರ್ದಿಷ್ಟ ಸಂಘಟನೆಯ ಮಟ್ಟಕ್ಕೆ ಇಳಿಸಿ ನೋಡುವುದು ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಅವಮಾನ ಎಂದು ಹೇಳಿದ್ದಾರೆ.
ಇದನ್ನೂ ಓದಿ :
ಹಿಂದೂ ಧರ್ಮವು ಯಾವುದೇ ಒಂದು ಸಂಘಟನೆಯ ಸ್ವತ್ತಲ್ಲ. ಅದು ಆರ್‌ಎಸ್‌ಎಸ್‌ಗಿಂತಲೂ ದೊಡ್ಡದು, ವಿಶಾಲವಾದುದು ಮತ್ತು ಎಲ್ಲರನ್ನು ಒಳಗೊಳ್ಳುವ ನಾಗರಿಕತಾ ಪರಂಪರೆ. ವಿವಾದಾತ್ಮಕ ಹಿನ್ನೆಲೆ ಹೊಂದಿರುವ ಒಂದು ಸಂಘಟನೆಯನ್ನು ಸಂಪೂರ್ಣ ಹಿಂದೂ ಸಮಾಜದ ಪ್ರತಿನಿಧಿಯಂತೆ ಬಿಂಬಿಸುವುದು ಸರಿಯೇ? ಎಂದು ಅವರು ಪ್ರಶ್ನಿಸಿದ್ದಾರೆ.
ಹಿಂದೂತ್ವದ ಬಗ್ಗೆ ದಿನವೂ ದೊಡ್ಡ ದೊಡ್ಡ ಭಾಷಣ ಮಾಡುವ ಬಿಜೆಪಿಯ ನಾಯಕರು ಮತ್ತು ಸ್ವಯಂ ಘೋಷಿತ ‘ಹಿಂದೂ ರಕ್ಷಕರು’ ಈಗ ಏನು ಹೇಳುತ್ತಾರೆ? ಹಿಂದೂ ಧರ್ಮ ಮತ್ತು ಆರ್‌ಎಸ್‌ಎಸ್ ಒಂದೇ ಎಂದು ಹೇಳುವುದನ್ನು ಅವರು ಒಪ್ಪುತ್ತಾರೆಯೇ? ಎಂದು ಬಿ.ಕೆ. ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…