ಬೆಂಗಳೂರು: ಬಿಜೆಪಿಗೆ ವೋಟು ಹಾಕದ ಮುಸ್ಲಿಮರು ದೇಶ ವಿರೋಧಿಗಳಾಗಿದ್ದು, ಅವರ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದಿಲ್ಲ ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ಧಾರೆ.
ದಾವಣಗೆರೆಯಲ್ಲಿರುವ ತಮ್ಮ ಸ್ವಕ್ಷೇತ್ರ ಹೊನ್ನಾಳಿಯಲ್ಲಿ ಸಿಎಎ ಪರ ಸಮಾವೇಶವನ್ನುದ್ದೇಶಿಸಿ ಮಾತನಾಡುವ ವೇಳೆ ಅವರು ಈ ವಿವಾದಾತ್ಮಕ ಮಾತುಗಳನ್ನಾಡಿದ್ಧಾರೆ.
“ನಾನು ಮುಸಲ್ಮಾನರಿಗೆ ಎಚ್ಚರಿಕೆ ನೀಡುತ್ತೇನೆ. ಅವರ ಪ್ರದೇಶಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವುದಿಲ್ಲ. ಮುಸ್ಲಿಮರು ದೇಶಪ್ರೇಮಿಗಳಲ್ಲ. ಅವರು ಬಿಜೆಪಿಗೆ ವೋಟು ಹಾಕುವುದಿಲ್ಲ. 2018ರ ವಿಧಾನಸಭಾ ಚುನಾವಣೆಯಲ್ಲೂ ಅವರು ನನಗೆ ವೋಟು ಹಾಕಲಿಲ್ಲ. ಮುಂದಿನ ಚುನಾವಣೆಯಲ್ಲಿ ನಾನು ಅವರಲ್ಲಿ ಮತ ಯಾಚಿಸುವುದಿಲ್ಲ” ಎಂದು ಎಂ.ಪಿ. ರೇಣುಕಾಚಾರ್ಯ ಟೀಕಿಸಿದ್ಧಾರೆ.
ಮುಸ್ಲಿಮರು ತಮ್ಮ ಮಸೀದಿಗಳಲ್ಲಿ ಶಸ್ತ್ರಾಸ್ತ್ರ ಸಂಗ್ರಹ ಮಾಡುತ್ತಾರೆ. ದೇಶ ನಿರ್ಮಾಣದಲ್ಲಿ ಅವರ ಕೊಡುಗೆ ಶೂನ್ಯ ಇದೆ ಎಂದು ಹೇಳಿದ ಅವರು, ಹೊನ್ನಾಳಿ ಕ್ಷೇತ್ರವನ್ನು ಸಂಪೂರ್ಣವಾಗಿ ಕೇಸರೀಮಯ ಮಾಡುವುದಾಗಿ ಪಣ ತೊಟ್ಟಿದ್ಧಾರೆ.
ಆರೆಸ್ಸೆಸ್ ಸಂಘಟನೆಯನ್ನು ನಿಷೇಧಿಸಬೇಕೆಂಬ ಕೂಗು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಆರೆಸ್ಸೆಸ್ ಒಂದು ದೇಶಪ್ರೇಮಿ ಸಂಘಟನೆಯಾಗಿದೆ. ಯಾರಾದರೂ ಅದನ್ನು ಪ್ರಶ್ನಿಸಿದರೆ ನಾನು ಸುಮ್ಮನಿರುವುದಿಲ್ಲ. ಅವರಿಗೆ ತಕ್ಕ ಪಾಠ ಕಲಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ಧಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…