ಬಂಟ್ವಾಳ: ಸಜೀಪ ಮುನ್ನೂರು ನಿವಾಸಿ, ಆರೆಸ್ಸೆಸ್ ಕಾರ್ಯಕರ್ತನಾಗಿದ್ದ ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಕೊಲೆ ಆರೋಪಿ ಶರೀಫ್ ಎಂಬಾತನ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಇಂದು ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ ನಡೆದಿದೆ.
ಶರೀಫ್ ತೆರಳುತ್ತಿದ್ದ ಬೈಕಿಗೆ ದುಷ್ಕರ್ಮಿಗಳು ಬಂದ ಬೈಕನ್ನು ಢಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ್ದಾರೆ. ಈ ಸಂದರ್ಭ ಬೈಕ್ ನಲ್ಲಿದ್ದ ಹಿಂಬದಿ ಸವಾರರು ಮತ್ತು ಕಾರಿನಲ್ಲಿದ್ದವರು ಇಳಿದು ಶರೀಫ್ ಗೆ ತಲವಾರು ಬೀಸಿ, ದುಷ್ಕರ್ಮಿಗಳ ತಂಡ ಪರಾರಿಯಾಗಿದೆ. ಗಾಯಾಳು ಶರೀಫ್ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಲಂಪಾಡಿ ಶಾರದಾ ನಗರದ ನಿವಾಸಿಯಾದ ಶರೀಫ್ ಮನೆಯಿಂದ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎರಡು ಬೈಕ್, ಒಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ದಾಳಿ ನಡೆಸಿದ್ದು, ಆದರೆ ಆತ ಓಡಿ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…