Featured

ಆರೆಸ್ಸೆಸ್ ಕೋಮುವಾದ ಬಿತ್ತುವ ಸಂಘಟನೆಯಲ್ಲ: ಪ್ರಹ್ಲಾದ್ ಜೋಶಿ – vishwanews24

ದೇಶವನ್ನು ಜಾಗೃತಗೊಳಿಸುವುದು ಆರೆಸ್ಸೆಸ್ ನ  ಧ್ಯೇಯ ಮತ್ತು ಶಕ್ತಿ : ಪ್ರಹ್ಲಾದ್ ಜೋಶಿ

ಹೊಸದಿಲ್ಲಿ: ಕಾಂಗ್ರೆಸ್ಸಿಗರು ಇನ್ನಾದರೂ ಪಾಠ ಕಲಿಯಲಿ. ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಯಾವತ್ತೂ ರಾಷ್ಟ್ರೀಯ ಹಿತಕ್ಕಾಗಿ ಇರುವಂತಹ ಒಂದು ಜಾಗೃತ ಸಂಘಟನೆಯೇ ಹೊರತು ಕೋಮುವಾದ ಬಿತ್ತುವುದು ಅದರ ಕೆಲಸವಲ್ಲ. ದೇಶವನ್ನು ಜಾಗೃತಗೊಳಿಸುವುದೇ ಅದರ ಧ್ಯೇಯ ಮತ್ತು ಶಕ್ತಿ ಎಂಬುದನ್ನು ಅರಿತುಕೊಳ್ಳಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಗುರುವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಆರೆಸ್ಸೆಸ್ ಶಬ್ದ ಕೇಳಿದರೆ ಸಾಕು ಉರಿದುಬಿಡುತ್ತಿದ್ದ ಕಾಂಗ್ರೆಸ್ಸಿಗರಿಗೆ ಇದೀಗ ಅವರ ಸರಕಾರದಿಂದಲೇ ತಕ್ಕ ಉತ್ತರ ಸಿಕ್ಕಿದೆ. ಕರ್ನಾಟಕ ರಾಜ್ಯದಲ್ಲಿ 518 ಆರೆಸ್ಸೆಸ್ ಪಥಸಂಚಲನ ಕಾರ್ಯಕ್ರಮಗಳು ಅತ್ಯಂತ ಶಿಸ್ತುಬದ್ಧವಾಗಿ ಯಶಸ್ವಿಗೊಂಡಿವೆ. ಕಾಂಗ್ರೆಸ್ಸಿಗರು ಮಾಡಿದ ಅಪಪ್ರಚಾರಕ್ಕೆ ಇದು ತಕ್ಕ ಉತ್ತರವಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ಪಥಸಂಚಲನಕ್ಕೆ ಅವಕಾಶ ಕೊಟ್ಟರೆ ಗದ್ದಲ, ಗಲಾಟೆ, ಕೋಮು ಗಲಭೆಗೆ ಕಾರಣವಾಗುತ್ತದೆ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಲೇ ಇತ್ತು. ಆದರೆ, ರಾಜ್ಯದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಪಥಸಂಚಲನ ನಡೆಸಿದ್ದರೂ ಅಂತಹ ಯಾವುದೇ ಅಹಿತಕರ ವಾತಾವರಣ ಉಂಟಾಗಿಲ್ಲ. ಸಂಘದ ಹೆಸರು ಕೇಳಿದರೆ ಸಾಕು ಕಾಂಗ್ರೆಸ್ ನಾಯಕರಿಗೆ ಮೈ ಉರಿಯುತ್ತದೆ. ಇಂತಹವರಿಗೆ ಇದೀಗ ಕಾಂಗ್ರೆಸ್ ಸರಕಾರವೇ ತಕ್ಕ ಉತ್ತರ ನೀಡಿದೆ ಎಂದರು.

ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನೀಡಿದರೆ ಗಲಾಟೆ, ದೊಂಬಿ ಹಾಗೂ ಕೋಮು ಗಲಭೆಗಳಿಗೆ ದಾರಿಯಾಗುತ್ತದೆ ಎಂಬ ಕಾಂಗ್ರೆಸ್ ನಾಯಕರ ಅಪಪ್ರಚಾರದ ನಡುವೆಯೂ ಧೃತಿಗೆಡದೆ ರಾಜ್ಯದಲ್ಲಿ ಬರೋಬ್ಬರಿ 518 ರಾಷ್ಟ್ರೀಯ ಪಥಸಂಚಲನ ಕಾರ್ಯಕ್ರಮಗಳನ್ನು ನಡೆಸಿದೆ. ಸಂಘವು ಶಿಸ್ತಿಗೆ ಪ್ರತೀಕವಾಗಿದೆ ಮತ್ತು ‘ದೇಶ ಮೊದಲು, ದೇಶ ಸೇವೆಯೇ ಪರಮೋಚ್ಚ’ ಎಂಬ ಆರೆಸ್ಸೆಸ್ ಸಿದ್ಧಾಂತವನ್ನು ಮತ್ತಷ್ಟು ಬಲವಾಗಿ ಪ್ರತಿಪಾದಿಸಿದೆ ಎಂದು ಜೋಶಿ ಪ್ರತಿಕ್ರಿಯೆ ನೀಡಿದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

4 minutes ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

8 minutes ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

20 minutes ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

45 minutes ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

51 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago