ಉಡುಪಿ: ಆರೆಸ್ಸೆಸ್ ನಿಷೇಧಿಸುವ ಸಂಬಂದ ಸಚಿವ ಪ್ರಿಯಾಂಕ ಖರ್ಗೆ ಅವರು ಅವರ ಅಭಿಪ್ರಾಯವನ್ನು ಸರಕಾರಕ್ಕೆ ಹೇಳಿದ್ದಾರೆ. ಅವರ ಅಭಿಪ್ರಾಯ ತಿಳಿಸುವ ಹಕ್ಕು ಅವರಿಗೆ ಖಂಡಿತವಾಗಿಯೂ ಇದೆ. ಮುಖ್ಯಮಂತ್ರಿಗಳು ಎಲ್ಲರ ಜತೆ ವಿಮರ್ಶಿಸಿ ತೀರ್ಮಾನ ತೆಗೆದುಕೊಳ್ಳಬಹುದು. ಆರೆಸ್ಸೆಸ್ ತನ್ನ ಹೆಸರಿನಂತೆ ರಾಷ್ಟ್ರೀಯ ಸೇವೆ ಮಾಡುತ್ತಿದೆ. ವ್ಯವಸ್ಥೆಯಲ್ಲಿ ಕೆಲವು ತಪ್ಪುಗಳಾಗುವುದು ಸಹಜ. ತಪ್ಪುಗಳು ಇದೆಯೋ ಇಲ್ಲವೋ ವಿಮರ್ಶಿಸಬೇಕು ಎಂದು ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.
ಉಡುಪಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಒಬ್ಬರಿಗೆ ಸರಿ ಎಂದು ಕಂಡದ್ದು ಮತ್ತೊಬ್ಬರಿಗೆ ತಪ್ಪು ಎಂದೆನಿಸಬಹುದು. ತಪ್ಪುಗಳಿದ್ದರೆ ನಿವಾರಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಏನೇ ಆದರೂ ಆರೆಸ್ಸೆಸ್ ಸೇವಾ ಕಾರ್ಯ ಮುಂದುವರಿಯುತ್ತದೆ. ಸೇವಾಕಾರ್ಯ ಮಾಡುತ್ತಲೇ ಬೆಳೆದು ಬಂದಿದೆ. ಹೀಗಾಗಿ ಮುಖ್ಯಮಂತ್ರಿಗಳು ಎಲ್ಲರ ಜತೆ ಚರ್ಚಿಸಿ ಯೋಗ್ಯವಾದ ನಿರ್ಧಾರ ಕೈಗೊಳ್ಳಲಿ. ಯಾವುದೇ ವ್ಯವಸ್ಥೆಯಲ್ಲಿ ಲೋಪದೋಷಗಳು ಇದ್ದರೆ ಸರಿಪಡಿಸಲು ಗಮನ ಹರಿಸಬೇಕು. ಸಮಾಜಕ್ಕೆ ಆಗುವ ಲಾಭವನ್ನು ಮಾತ್ರ ಸರಕಾರ ಗಮನಿಸಬೇಕು. ನೂರು ವರ್ಷ ಪೂರೈಸಿರುವ ಆರೆಸ್ಸೆಸ್ ನಿಷೇಧ ಮಾಡುವುದು ಸರಿಯಲ್ಲ. ಸರಕಾರ ಎಲ್ಲ ವಿಷಯದಲ್ಲೂ ಲಾಭ ನಷ್ಟವನ್ನು ಗಮನಿಸಬೇಕು. ಮೂಗು ಸೋರುತ್ತಿದೆ ಎಂದು ಅದನ್ನು ಕಿತ್ತೆಸೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…