ಬೆಂಗಳೂರು : ಆರೆಸ್ಸೆಸ್ ಹಿಂದೆ ಬಹುದೊಡ್ಡ ಹಣ ಅಕ್ರಮ ವರ್ಗಾವಣೆ ದಂಧೆ(ಮನಿ ಲಾಂಡರಿಂಗ್) ಇದೆ. ಹೀಗಾಗಿ, ಕಾನೂನು, ಸಂವಿಧಾನದಡಿ ಈ ಸಂಘಟನೆ ನೋಂದಣಿ ಆಗುವವರೆಗೂ ನಾನು ಈ ವಿಚಾರ ಕೈಬಿಡುವ ಪುಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ರವಿವಾರ ನಗರದ ಗಾಂಧಿ ಭವನ ಸಭಾಂಗಣದಲ್ಲಿ ಅಹರ್ನಿಶಿ ಪ್ರಕಾಶನ ಸಹಯೋಗದೊಂದಿಗೆ ಏರ್ಪಡಿಸಿದ್ದ ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿ ಬರೆದಿರುವ ‘ಕರಾವಳಿಯ ರಕ್ತ-ಕಣ್ಣೀರು’ (ಮತೀಯ ದ್ವೇಷದ ಬೆಂಕಿಯಲ್ಲಿ ನಲುಗಿದ ಬದುಕುಗಳು) ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಆರೆಸ್ಸೆಸ್ ಸಂಘಟನೆಯೊಂದಿಗೆ ಸರಿ ಸುಮಾರು 2500 ಸಹ ಸಂಘಟನೆಗಳು ಜತೆಯಾಗಿವೆ. ಅಮೆರಿಕಾ, ಇಂಗ್ಲೆಂಡ್ ಸೇರಿದಂತೆ ಅನೇಕ ರಾಷ್ಟ್ರಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ. ಇದನ್ನು ಗಮನಿಸಿದರೆ, ಆರೆಸ್ಸೆಸ್ ಹಿಂದೆ ಬಹುದೊಡ್ಡ ಹಣ ಅಕ್ರಮ ವರ್ಗಾವಣೆ ದಂಧೆ(ಮನಿ ಲಾಂಡರಿಂಗ್) ಇದೆ ಎಂದು ಹೇಳಬಹುದು ಎಂದರು.
ಇದನ್ನೂ ಓದಿ:
ಆರೆಸ್ಸೆಸ್‌ನ ಹಣದ ಮೂಲ ಪ್ರಶ್ನೆ ಮಾಡಿದರೆ ನಮಗೆ ಗುರು ದಕ್ಷಣೆ ಬರುತ್ತದೆ ಎಂದು ತಿಳಿಸುತ್ತಾರೆ. ಆದರೆ, ನಾನು ಅಧ್ಯಯನ ನಡೆಸಿದಾಗ ಇವರ ಪ್ರಕಾರ ಗುರು ದಕ್ಷಣೆ ಎಂದರೆ ‘ಧ್ವಜ’ ಎಂದರ್ಥ. ಹಾಗಾದರೆ, ನಾಳೆ ಬೆಳಗ್ಗೆ ನಾನು ಸಹ ನೀಲಿ ಧ್ವಜ ಹಾರಿಸಿ ಹಣ ವಸೂಲಿ ಮಾಡಿದರೆ, ಸರಕಾರ, ಇವರು(ಆರೆಸ್ಸೆಸ್) ಒಪ್ಪುತ್ತಾರೆಯೇ ಎಂದು ಕೇಳುತ್ತೇನೆ. ಹೀಗೆ, ಆಧಾರ ರಹಿತ ಮಾತುಗಳಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದೆ ಈ ಆರೆಸ್ಸೆಸ್ ಸಂಘಟನೆ ಸಂವಿಧಾನ, ಕಾನೂನು ಅಡಿಯಲ್ಲಿ ನೋಂದಣಿ ಆಗುವರೆಗೂ ನಾನು ಬಿಡುವ ಮಾತೇ ಇಲ್ಲ ಎಂದು ಅವರು ಹೇಳಿದರು. ವಾಲ್ಮೀಕಿ ಬರೆದ ರಾಮಾಯಣವೇ ಬೇರೆ, ಈಗ ನಡೆಯುತ್ತಿರುವುದೇ ಬೇರೆ. ರಾಜಕಾರಣಿಗಳು, ಧಾರ್ಮಿಕ ಗುರುಗಳು ತಮಗೆ ಬೇಕಾದಂತೆ ಧರ್ಮದ ಕುರಿತು ಮಾತನಾಡುತ್ತಿದ್ದಾರೆ. ಯಾವ ಧರ್ಮವೂ ಹಿಂಸೆ ಪುಚೋದಿಸಲ್ಲ. ಮೂರು-ಮೂರು ಮಕ್ಕಳನ್ನು ಹೆರಬೇಕು ಎನ್ನುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮದುವೆ ಆಗಲ್ಲ. ಆದರೂ, ಬೇರೆಯವರ ಮಕ್ಕಳನ್ನು ಎತ್ತಿಕಟ್ಟುವ ಮಾತು ಹೇಳುತ್ತಾರೆ. ಹೀಗೆ, ಬಿಜೆಪಿಯವರು ಹೊರಗೊಂದು, ಒಳಗೊಂದು ಮಾತುಗಳನ್ನು ನಿತ್ಯ ಹೇಳಿ ಬಡವರ ಮಕ್ಕಳನ್ನು ಬೀದಿಪಾಲು ಮಾಡುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…