ತುಳಸಿ ಸಾಮಾನ್ಯ ಎಲ್ಲರ ಮನೆಯಲ್ಲೂ ಬೆಳೆಯುವ ದೈವಿಕ ಸಸ್ಯ. ತುಳಸಿ ಧಾರ್ಮಿಕವಾಗಿ ಮಾತ್ರ ಹೆಸರುಗಳಿಸಿಲ್ಲ, ಅದರಲ್ಲಿ ಹಲವು ಔಷಧೀಯ ಗುಣಗಳೂ ಇದೆ. ಆದರೆ ಈ ಅಂಶ ತುಳಸಿ ಬೆಳೆಸಿದ ಎಷ್ಟೋ ಜನರಿಗೂ ತಿಳಿದಿರುವುದಿಲ್ಲ. ಇದರ ಎಲೆಯ ಗಂಧವೇ ವಾತಾವರಣವನ್ನು ತಂಪು ಮತ್ತು ಕಲ್ಮಶರಹಿತವಾಗಿಸುವ ಶಕ್ತಿ ಹೊಂದಿದೆ.
ಪ್ರತಿದಿನ ಬೆಳ್ಳಿಗ್ಗೆ 5 ತುಳಸಿ ಎಲೆಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ 50 ಕ್ಕೂ ಹೆಚ್ಚು ಖಾಯಿಲೆಗಳು ನಿಮ್ಮಿಂದ ದೂರವಿರುತ್ತವೆ. ಆರೋಗ್ಯದ ದೃಷ್ಟಿಯಿಂದ ಇದನ್ನು ಅಭ್ಯಾಸ ಮಾಡಿಕೊಳ್ಳುವುದರಿಂದ ದೀರ್ಘಕಾಲ ಆರೋಗ್ಯದಿಂದಿರಬಹುದು. ತುಳಸಿಯ ಇನ್ನಿತರ ಆರೋಗ್ಯಕರ ಲಾಭಗಳ ಬಗ್ಗೆ ಇಲ್ಲಿದೆ ಮಾಹಿತಿ.
# ಜ್ವರ ಹಾಗೂ ಶೀತಕ್ಕೆ ರಾಮಬಾಣ:
ಜ್ವರ ಹಾಗೂ ಶೀತಕ್ಕೆ ಇದರ ಎಲೆಗಳನ್ನು ಚಹಾದೊಂದಿಗೆ ಕುದಿಸಿ ಕುಡಿಯುವುದರಿಂದ ಮಲೇರಿಯಾ ಹಾಗೂ ಡೆಂಗ್ಯೂ ಜ್ವರ ಉಪಶಮನವಾಗುತ್ತದೆ. ಮತ್ತು ತುಳಸಿ ರಸ ಜ್ವರವನ್ನು ತಗ್ಗಿಸುವಲ್ಲಿ ಸಹಕಾರಿ. ಇದರ ಎಲೆಯನ್ನು ಜಗಿಯುವುದರಿಂದ ಶೀತ ಹಾಗೂ ಕೆಮ್ಮು ನಿವಾರಣೆಯಾಗುತ್ತದೆ.
# ಕಿಡ್ನಿ ಕಲ್ಲಿನ ಸಮಸ್ಯೆ:
ತುಳಸಿ ರಸವನ್ನು ಜೇನಿನೊಂದಿಗೆ ನಿಯಮಿತವಾಗಿ 6 ತಿಂಗಳು ತೆಗೆದುಕೊಂಡಲ್ಲಿ ನೋವಿನ ಬಾಧೆ ಕಡಿಮೆಯಾಗುತ್ತದೆ. ಹೀಗೆ ಬಹುವಿಧ ಕಾಯಿಲೆಗಳಿಗೆ ಮನೆಮದ್ದಾಗಿರುವ ತುಳಸಿಯು ವಾತಾವರಣಕ್ಕೂ ಒಳ್ಳೆಯದು. ಹೆಚ್ಚು ಖರ್ಚಿಲ್ಲದೆ ಬೆಳೆಸಬಹುದಾದ ತುಳಸಿಯಿಂದ ನಾವು ಪಡೆಯಬಹುದಾದ ಪ್ರಯೋಜನ ಅಪಾರವಾದುದು.
# ಜ್ಞಾಪಕ ಶಕ್ತಿ ಹೆಚ್ಚುತ್ತದೆ :
ಐದು ತುಳಸಿ ಎಲೆಯನ್ನು ಪ್ರತಿ ದಿನ ತಿಂದರೆ ಹಲವು ಸೋಂಕು ಮತ್ತು ರೋಗವನ್ನು ದೂರವಿರಿಸಬಹುದು. ಇದರ ಸೇವನೆಯಿಂದ ಜ್ಞಾಪಕ ಶಕ್ತಿಯೂ ಹೆಚ್ಚಾಗಿ ಬುದ್ಧಿವಂತಿಕೆಯೂ ಚುರುಕುಗೊಳ್ಳುತ್ತದೆ. ಇದನ್ನು ವಯಸ್ಸಾದವರು ಸೇವಿಸಿದರೆ ಸುಸ್ತು ಕಡಿಮೆಗೊಳ್ಳುತ್ತದೆ.
#ಕೊಲೆಸ್ಟ್ರಾಲ್:
ತುಳಸಿ ಬೊಜ್ಜನ್ನು ನಿಯಂತ್ರಿಸುವುದಲ್ಲದೆ ರಕ್ತದಲ್ಲಿನ ಕೊಬ್ಬಿನಂಶವನ್ನೂ ನಿಯಂತ್ರಿಸುತ್ತದೆ. ಜ್ವರ, ಕೆಮ್ಮು ಮತ್ತು ಟಿಬಿ ರೋಗಿಗಳೂ 3 ಗ್ರಾಂ ತುಳಸಿಯನ್ನು ಪ್ರತಿನಿತ್ಯ ಸೇವಿಸಿದರೆ ಉಪಯೋಗ ಹೊಂದಬಹುದು.