ಬೆಂಗಳೂರು :ರೈತರ ಸಾಲಮನ್ನಾ ಬಗ್ಗೆ ಘೋಷಣೆ ಮಾಡಿದ್ದೇನೆ. ರಾಷ್ಟ್ರೀಕೃತ ಬ್ಯಾಂಕ್ ಗಳು 34೦೦೦ ಕೋಟಿ ರೂ. ಸಾಲದ ಮಾಹಿತಿ ನೀಡಿದ್ದರು. ನಾಲ್ಕು ಹಂತಗಳಲ್ಲಿ ನಾಲ್ಕು ವರ್ಷದಲ್ಲಿ ಹಣದ ಹಂಚಿಕೆ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ಸಿಎಂ ಹೇಳಿದರು.
ರೈತರಿಂದ ಮಾಹಿತಿ ಪಡೆದು ದಾಖಲೆ ಪಡೆದು ಮನ್ನಾ ಸೌಲಭ್ಯ ಪಡೆಯಲಾಗಿದೆ. 2018-19 ರಲ್ಲಿ 12೦೦೦ ಕೋಟಿ ರೂ, 2019-20 ರಲ್ಲಿ 13೦೦೦ ಕೋಟಿ ರೂ. ಸೇರಿ ಒಟ್ಟು 25೦೦೦ ಕೋಟಿ ರೂ. ಅನುದಾನ ನೀಡಿದ್ದೇವೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು..
ಬ್ಯಾಂಕ್ ಅಧಿಕಾರಿಗಳು ಹಿಂದೆದೂ ಇಷ್ಟು ವೈಜ್ಞಾನಿಕವಾಗಿ ಸಾಲಮನ್ನಾ ಮಾಡಲಾಗಿದೆ. ರೈತರ ಬೇರೆ ಬೇರೆ ಹೆಸರಿನಲ್ಲಿ ಸಾಲ ಪಡೆಯಲಾಗಿದೆ. ಅದರ ಹಿನ್ನಲೆಯಲ್ಲಿ ಹೊರೆ ಕಡಿಮೆಯಾಗಿದೆ ಎಂದರು.
ರೈತರಿಗೆ ಕೊಟ್ಟಂತಹ ಮಾತನ್ನು ಪ್ರಾಮಾಣಿಕವಾಗಿ ಈಡೇರಿಸಲು ಸ್ಪಂದಿಸಿದ್ದೇವೆ.
ಗ್ರಾಮ ವಾಸ್ತವ್ಯದಿಂದಾಗಿ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಸ್ಥಳದಲ್ಲಿಯೇ ಉಳಿದ ಸಮಸ್ಯೆ ಬಗೆಹರಿಸಲು ಸಹಕಾರವಾಗಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಾಡಿನ ಜನತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ತಿರಸ್ಕರಿಸಿದ್ದಾರೆ. ಜನರು ಬಿಜೆಪಿಗೆ ಮತನೀಡಿ ಮೋಸ ಹೋದೆವು ಎಂದು ಬೇಸರಗೊಳ್ಳುವಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ನಮ್ಮ ಮೈತ್ರಿ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂಬ ವಿಶ್ವಾಸ ನನಗಿದೆ. ಮೈತ್ರಿ ಸರ್ಕಾರ ಜನರ ಎಲ್ಲ ನಿರೀಕ್ಷೆಗಳನ್ನು ಪೂರ್ಣಗೊಳಿಸಿಯೇ ತೀರುತ್ತದೆ. 12 ವರ್ಷದ ಹಿಂದೆ ಪರಿಸ್ಥಿತಿ ಬೇರೆ ಇತ್ತು 12 ವರ್ಷದ ಹಿಂದೆ ಸಿಎಂ ಆಗಿದ್ದಾಗ ಇದ್ದಂತಹಾ ಪರಿಸ್ಥಿತಿಗೂ ಇಂದಿನ ಪರಿಸ್ಥಿತಿಗೂ ವ್ಯತ್ಯಾಸ ಇದೆ. 12 ವರ್ಷದ ಹಿಂದೆ ಇದ್ದಂತಹಾ ಶಕ್ತಿ ಈಗ ಇಲ್ಲ. ಆದರೆ ಉತ್ಸಾಹ ಇದೆ. ಆರೋಗ್ಯದ ಸಮಸ್ಯೆ ಇದ್ದರೂ ಬದಿಗೊತ್ತಿ ಜನರ ಸೇವೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…