ಹಾವೇರಿ: ಇಂದಿನಿಂದ ದೇಶಾದ್ಯಂತ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಅಭಿಯಾನ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾವೇರಿ ಜಿಲ್ಲೆಯಲ್ಲಿ ಲಸಿಕೆಯನ್ನು ಪಡೆದರು.
ಹಾವೇರಿಯ ಹಿರೇಕೆರೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಚಿವ ಬಿ.ಸಿ. ಪಾಟೀಲ್ 60 ವರ್ಷ ಮೇಲ್ಪಟ್ಟ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವ ಬಿ.ಸಿ. ಪಾಟೀಲ್ ಅವರು, ದೇಶದಲ್ಲಿ ಆರೋಗ್ಯ, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಜನರಿಗೆ ಕೊರೋನಾ ವೈರಸ್ ವಿರುದ್ಧ ಹೋರಾಡಲು ಬೂಸ್ಟರ್ ಡೋಸ್‌ನ್ನು ಇಂದಿನಿಂದ ನೀಡಲಾಗುತ್ತಿದೆ. ಬೂಸ್ಟರ್ ಡೋಸ್ ಲಸಿಕೆ ವೇಳೆ ಮಿಕ್ಸ್ ಡೋಸ್ ನೀಡಲು ಅವಕಾಶವಿಲ್ಲ ಎಂದರು.
ಈ ಹಿಂದೆ ಮೊದಲ ಮತ್ತು ಎರಡನೇ ಡೋಸ್ ಯಾವ ಲಸಿಕೆ ಪಡೆಯಲಾಗಿದೆಯೋ ಅದೇ ಲಸಿಕೆ ಪಡೆಯಬೇಕು. ಕೋವಿಶೀಲ್ಡ್, ಕೋವ್ಯಾಕ್ಸಿನ್ 2 ಡೋಸ್ ಲಸಿಕೆ ಪಡೆದವರು, ಬೂಸ್ಟರ್ ಡೋಸ್‌ನ್ನೂ ಕೂಡ ಅವುಗಳನ್ನೇ ಪಡೆಯಬೇಕು. ಮಿಕ್ಸ್ ಬೂಸ್ಟರ್ ಡೋಸ್ ನೀಡಲು ಅನುಮತಿಸುವುದಿಲ್ಲ ಎಂದು ತಿಳಿಸಿದರು.
ಮುಂಚೂಣಿ ಆರೋಗ್ಯ ಕಾರ್ಯಕರ್ತರು, ಆರೋಗ್ಯ ಸೇವಕರು, 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಮೂರನೇ ಡೋಸ್ ಲಸಿಕೆಯನ್ನು ಪಡೆಯುವುದರಿಂದ ಓಮಿಕ್ರಾನ್ ರೂಪಾಂತರ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವ ವಿರುದ್ಧ ಶೇ. 88ರಷ್ಟು ರಕ್ಷಣೆ ನೀಡುತ್ತದೆ ಎಂದು ಯುಕೆ ಅಧ್ಯಯನವು ಕಂಡುಹಿಡಿದಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…