Featured

ಆರೋಗ್ಯ ಸೇತು – ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ – vishwanews24

ಆರೋಗ್ಯ ಸೇತು – ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಸರ್ಕಾರದ ಗುರಿ : ಸಿದ್ದರಾಮಯ್ಯ

ಬೆಳಗಾವಿ :ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸುವರ್ಣ ಸೌಧದ ಭವ್ಯ ಮೆಟ್ಟಟಿಲುಗಳ ಮೇಲೆ ಆಯೋಜಿಸಲಾಗಿದ್ದ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ಗಳಿಗೆ ಚಾಲನೆ ನೀಡಿ ಮಾತನಾಡಿದರು.

ಸಂಪರ್ಕ ರಹಿತ, ದುರ್ಗಮ ಮತ್ತು ಗುಡ್ಡಗಾಡು ಪ್ರದೇಶಗಳ ಜನರ ಮನೆಯ ಬಾಗಿಲಲ್ಲೆ ಆರೋಗ್ಯ ಸೇವೆ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಹಿಂದೆ ಆ್ಯಂಬುಲೆನ್ಸ್ ಗಳ ಸೇವೆಗೆ 2.90 ಲಕ್ಷ ರೂ.ಗಳ ವೆಚ್ಚವಾಗುತ್ತಿತ್ತು. ಪ್ರಸ್ತುತ ಆರೋಗ್ಯ ಸೇತುವಿನ ಪ್ರತಿ ಘಟಕಕ್ಕೆ 1.60 ಲಕ್ಷ ರೂ. ವೆಚ್ಚವಾಗಲಿದ್ದು, ಪ್ರತಿ ಘಟಕದಲ್ಲಿ ವೈದ್ಯರು, ಶುಶ್ರೂಷಿಕಿಯರು, ತಂತ್ರಜ್ಞರ ಸೇವೆ ಇರಲಿದ್ದು, ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಗೆ ನೆರವಾಗಲಿದೆ ಎಂದರು.

ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಸರ್ಕಾರದ ಗುರಿ

ಸಮಾಜದ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಜಾರಿಗೊಳಿಸಲಾಗಿದೆ. ಆರೋಗ್ಯ ಸೇವೆಗಳಿಂದ ವಂಚಿತರಾಗಿರುವ ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago