Featured

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಆರ್‌ಎಸ್‌ಎಸ್‌ ಸದಸ್ಯರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು ಎಂದು ಮಂಗಳವಾರ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಅವರು, ಧರ್ಮದ ಹೆಸರಿನಲ್ಲಿ ಏನು ಬೇಕಾದರೂ ಮಾಡುವಂತಿಲ್ಲ. ಆರ್‌ಎಸ್‌ಎಸ್‌ ಅನ್ನು ಕೇವಲ ಸಾಂಸ್ಕೃತಿಕ ಸಂಘಟನೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದರು.

ಆರ್ ಎಸ್ಎಸ್, ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುವ ಒಂದು ರಾಜಕೀಯ ಸಂಸ್ಥೆಯಾಗಿದೆ. ಆರ್‌ಎಸ್‌ಎಸ್‌ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಮತ್ತು ಹಣಕಾಸು ವ್ಯವಹಾರಗಳನ್ನು ಹೊಂದಿದೆ. ಈ ಆರ್ಥಿಕ ವ್ಯವಹಾರಗಳಿಗೆ ಲೆಕ್ಕಪತ್ರವನ್ನು ನೀಡಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು ಇದೆ. ಯಾವುದೇ ಸಂಘಟನೆ ತನ್ನನ್ನು ತಾನು ‘ಹಿಂದೂ ಧರ್ಮ’ದ ನೆರಳಲ್ಲಿ ಬಚ್ಚಿಟ್ಟುಕೊಂಡು, ಕಾನೂನಿನಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಗೃಹ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸುತ್ತಿರುವುದು ಕಾನೂನು ಪ್ರಕಾರ ಸರಿಯಾಗಿದೆ. ಆರ್‌ಎಸ್‌ಎಸ್‌ ಸಾಂಸ್ಕೃತಿಕ ಸಂಘಟನೆ ಎಂದು ಹೇಳಿಕೊಂಡರೂ, ವಾಸ್ತವದಲ್ಲಿ ಅದೊಂದು ರಾಜಕೀಯ ಸಂಘಟನೆ. ಅದು ಪ್ರತಿಯೊಂದು ಚುನಾವಣೆಯಲ್ಲಿಯೂ ಬಿಜೆಪಿ ಪರವಾಗಿ ಕೆಲಸ ಮಾಡುತ್ತದೆ. ಆದ್ದರಿಂದ, ಆರ್‌ಎಸ್‌ಎಸ್‌ ದೇಶದ ಕಾನೂನುಗಳನ್ನು ಪಾಲಿಸಬೇಕು ಮತ್ತು ನೋಂದಾಯಿಸಿಕೊಳ್ಳಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

23 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

24 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago